ಬೆಳಗಾವಿ ಜಿಲ್ಲಾ ಪೋಲಿಸರು ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ಮೂಲದ ವ್ಯಕ್ತಿ ಉತ್ತರ ಪ್ರದೇಶದ ವ್ಯಕ್ತಿಯೋರ್ವನ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿ ಎಸ್‌ಪಿ ಡಾ. ಭೀಮಾಶಂಕರ ಗುಳೇದ್, ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಗದಗ ಎಸ್‌ಪಿ ನ್ಯಾಮೇಗೌಡ ಸೇರಿದಂತೆ ಹಲವಾರು ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಈ ದಿನ ಫಲಶೃತಿ: ವರದಿಯ ಬೆನ್ನಲ್ಲೇ ರಾಜ್ಯ ಹೆದ್ದಾರಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್, “ಅಧಿಕಾರಿಗಳು ಯಾರೂ ಈ ರೀತಿ ಹಣ ಕೇಳುವುದಿಲ್ಲ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಜೊತೆಗೆ ಸೈಬರ್ ವಂಚನೆ ಕಂಡು ಬಂದಲ್ಲಿ ತಕ್ಷಣ ಪ್ರಕರಣ ದಾಖಲಿಸಬೇಕು” ಎಂದು ಮನವಿ ಮಾಡಿದ್ದಾರೆ.
