ಬೆಳಗಾವಿ | ನ.1ರಂದು ಕರಾಳ ದಿನಾಚರಣೆಗೆ ಎಂಇಎಸ್ ನಿರ್ಣಯ; ಕನ್ನಡಪರ ಹೋರಾಟಗಾರರು ತೀವ್ರ ಹೋರಾಟದ ಎಚ್ಚರಿಕೆ

Date:

Advertisements

ನವೆಂಬರ್ 1ರಂದು ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯ ಕಾರ್ಯಕರ್ತರು ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯ ಕೈಗೊಂಡಿದ್ದಾರೆ.

ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಎಂಇಎಸ್ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ ನೇತೃತ್ವದಲ್ಲಿ ಸಮಿತಿಯ ಕೆಲವು ಮುಖಂಡರು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

“1956ರಲ್ಲಿ ತಾತ್ಕಾಲಿಕ ಕೇಂದ್ರ ಸರ್ಕಾರ ಮರಾಠಿ ಭಾಷಿಕರ ಮೇಲೆ ಮಾಡಿದ ಅನ್ಯಾಯದ ವಿರುದ್ಧ ಕಳೆದ 68 ವರ್ಷಗಳಿಂದ ಮಹಾರಾಷ್ಟ್ರ ಏಕೀಕರಣ ಸಮಿತಿಯು ಕರಾಳ ದಿನವನ್ನು ಆಚರಿಸಿ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸುತ್ತ ಬಂದಿದೆ. ಈ ಬಾರಿಯೂ ಎಂಇಎಸ್ ತನ್ನ ಕರಾಳ ದಿನಾಚರಣೆಯನ್ನು ಆಚರಿಸಲಿದೆ. ಎಂಇಎಸ್‌ನ ಈ ನಿಷೇಧ ರ್‍ಯಾಲಿ ರಾಜ್ಯ ಸರ್ಕಾರದ ವಿರುದ್ಧವಲ್ಲದೇ ಕೇಂದ್ರ ಸರ್ಕಾರದ ವಿರುದ್ಧವಾಗಿದೆ” ಎಂದರು.

Advertisements

“ಒಕ್ಕೂಟ ವ್ಯವಸ್ಥೆಗೆ ಕರ್ನಾಟಕ ಸರ್ಕಾರ ಬೆಲೆ ಕೊಡುತ್ತಿಲ್ಲ. ಗಡಿಯಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ಮುಂದುವರಿಸಿದೆ. ಗಡಿ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಇರುವಾಗ ಗಡಿ ಭಾಗದ ಎರಡೂ ಕಡೆಯ ಜನರಿಗೆ ಸಮಾನ ಹಕ್ಕು, ಅವಕಾಶಗಳು ಇರುತ್ತವೆ. ಈ ದೃಷ್ಟಿಯಿಲ್ಲಿ ಕರಾಳ ದಿನಾಚರಣೆಗೆ ಅವಕಾಸ ಕೊಡಬೇಕು” ಎಂದು ಸಭೆಯಲ್ಲಿ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಹಕಾರಿ ಸಂಘಗಳು ₹5 ಲಕ್ಷದವರೆಗೆ ಶೂನ್ಯಬಡ್ಡಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ: ಸಚಿವ ಶಿವಾನಂದ ಪಾಟೀಲ

ಕರುನಾಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಮರಕುಂಬಿ ಈ ದಿನ.ಕಾಮ್‌ ಜೊತೆ ಮಾತನಾಡಿ, “ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿ ʼಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲʼವೆಂದು ತಿಳಿಸಿದ್ದಾರೆ. ಕನ್ನಡಪರ ಹೋರಾಟಗಾರರು ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಒಂದು ವೇಳೆ ನಿಮ್ಮ ಮೀರಿ ಕರಾಳ ದಿನ ಆಚರಿಸಿದರೆ ತೀವ್ರ ಹೋರಾಟ ಮಾಡಲಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X