ಬೆಳಗಾವಿ | ದಲಿತ ಕುಟುಂಬ ನಿರ್ಮಿಸಿದ್ದ ಜಾನುವಾರು ಶೆಡ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Date:

ಸರ್ಕಾರಿ ಗೋಮಾಳದಲ್ಲಿ ದಲಿತ ಕುಟುಂಬ ನಿರ್ಮಿಸಿದ್ದ ಜಾನುವಾರು ಶೆಡ್‌ಗೆ ದುಷ್ಕರ್ಮಿಗಳು ರಾತ್ರೋರಾತ್ರಿ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.

- Advertisement -

ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಗೋಮಾಳದಲ್ಲಿ ದಲಿತ ಕುಟುಂಬವು ಶೆಡ್ ನಿರ್ಮಿಸಿಕೊಂಡಿತ್ತು. ಈ ಶೆಡ್‌ಗೆ ರಾತ್ರೋರಾತ್ರಿ ನುಗ್ಗಿದ ದುಷ್ಕರ್ಮಿಗಳು ಬೆಂಕಿ ಹಚ್ಚಿ, ಪರಾರಿಯಾಗಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಂಕಿ ಹಚ್ಚಿದ ಕೂಡಲೇ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಕರೆ ಮಾಡಿದ್ದರಿಂದ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಬೆಂಕಿ 10

ಈ ಕುರಿತು ಈ ದಿನ.ಕಾಮ್ ಜೊತೆ ಮಾತನಾಡಿದ ಸಂತ್ರಸ್ತ ದಲಿತ ಕುಟುಂಬದ ಸದಸ್ಯ ಅನಿಲ್, “ಭಾನುವಾರ ರಾತ್ರಿ ಮಲಗಿದ್ದ ವೇಳೆ ಶೆಡ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಬಳಿಕ ಕಲ್ಲು ತೂರಾಟ ನಡೆಸಿ, ಪರಾರಿಯಾಗಿದ್ದಾರೆ. ಇದರ ಹಿಂದೆ ಜೈನ ಸಮುದಾಯದ ವ್ಯಕ್ತಿಯೋರ್ವನ ಕೈವಾಡವಿದೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಅ.29,30: ಕಲ್ಯಾಣ ಕರ್ನಾಟಕದ ಬಯಲಾಟ ಪರಂಪರೆ ಕುರಿತು ವಿಚಾರ ಸಂಕಿರಣ; ಬಯಲಾಟ ಪ್ರದರ್ಶನ

“ಈ ಜಾಗವು ನಮ್ಮ ಹೆಸರಿನಲ್ಲಿದೆ. ಆದರೆ ಗ್ರಾಮ ಪಂಚಾಯಿತಿಯವರು ನಮ್ಮ ಹೆಸರಿನಲ್ಲಿ ಉತಾರ ಕೊಟ್ಟಿರುವುದಿಲ್ಲ. 2017ರಲ್ಲಿ ಇದೇ ರೀತಿಯಾಗಿ ಗಲಾಟೆ ಮಾಡಿದ್ದರು. ಆ ಸಂದರ್ಭದಲ್ಲಿ ಪೊಲೀಸರಿಗೆ ದೂರು ನೀಡಿದ್ದೆವು. ಮತ್ತೆ ಹೀಗೆ ಮಾಡಿದ್ದಾರೆ. ಇದಕ್ಕೆ ಕಾರಣ ಜೈನ ಸಮುದಾಯದ ವ್ಯಕ್ತಿಯಾಗಿದ್ದು, ಅವನ ವಿರುದ್ಧ ಮತ್ತೊಮ್ಮೆ ಪೊಲೀಸರಿಗೆ ದೂರು ಕೊಡುತ್ತೇವೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....