ಕರ್ನಾಟಕ ಸರ್ಕಾರದ ವಿಧಾನ ಸಭೆಯ ಮುಖ್ಯ ಸಚೇತಕರನ್ನಾಗಿ ಶಾಸಕ ಅಶೋಕ ಪಟ್ಟಣ ಅವರನ್ನು ಆಯ್ಕೆ ಮಾಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಪತ್ರ ನೀಡಿ ಶುಭಾಷಯ ತಿಳಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಕ್ಷೇತ್ರದಿಂದ ಮೂರನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಅಶೋಕ ಪಟ್ಟಣ ಅವರನ್ನು ಸಿದ್ಧರಾಮಯ್ಯ ಸರ್ಕಾರ ಸಚೇತಕರನ್ನಾಗಿ ನೇಮಕ ಮಾಡಿದೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿಯೂ ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕರಾಗಿದ್ದ ಅವರು ಉತ್ತಮ ಅನುಭವ ಹೊಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ನಂದಿ ಬೆಟ್ಟಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ; ಪ್ರವಾಸಿಗರಿಗೆ ನಿರ್ಬಂಧ
ಮುಖ್ಯ ಸಚೇತಕರಾಗಿ ಆಯ್ಕೆ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಶಾಸಕ ಅಶೋಕ ಪಟ್ಟಣ ಅವರು ಧನ್ಯವಾದ ತಿಳಿಸಿದರು