ಬೆಳಗಾವಿ | ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Date:

Advertisements

ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಬೆಳಗಾವಿ ನಗರದಲ್ಲಿ ನಡೆದ ಸಭೆಯಲ್ಲಿ ಕರಾಳ ದಿನಾಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ದೀಪಾವಳಿ ಹಬ್ಬ ಮತ್ತು ಕರ್ನಾಟಕ ರಾಜ್ಯೋತ್ಸವ ನವೆಂಬರ್ 1ರಂದೇ ಬಂದಿರುವುದರಿಂದ ಅಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ, ನವೆಂಬರ್‌ 3ರಂದು ಮೆರವಣಿಗೆ ಆಯೋಜಿಸಬೇಕೆಂಬುದು ಕೆಲವು ಯುವಕ ಸಂಘಟನೆಗಳ ಮುಖಂಡರು ಒತ್ತಾಯವಾಗಿತ್ತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕನ್ನಡ ಹೋರಾಟಗಾರರು ಯಾವ ಕಾರಣಕ್ಕೂ ರಾಜ್ಯೋತ್ಸವದ ಮೆರವಣಿಗೆ ದಿನಾಂಕ ಮುಂದೂಡುವಂತಿಲ್ಲ. ಬೇಕಿದ್ದರೆ ಮೆರವಣಿಗೆ ಸಮಯ ವಿಸ್ತರಿಸಿ ಎಂದರು. ನಂತರ ಈ ಕುರಿತು ಚರ್ಚಿಸಿದ ನಂತರ, ನವೆಂಬರ್‌ 1ರಂದೇ ರಾಜ್ಯೋತ್ಸವದ ಭವ್ಯ ಮೆರವಣಿಗೆ ನಡೆಸುವ ನಿರ್ಧಾರವನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಕಟಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ವ್ಯಾಪಾರಕ್ಕೆಂದು ತಂದಿದ್ದ ₹1.50 ಲಕ್ಷ ಮೌಲ್ಯದ ಹಂದಿಗಳ ಕಳ್ಳತನ

Advertisements

“ದೀಪಾವಳಿ ಮತ್ತು ರಾಜ್ಯೋತ್ಸವ ಜತೆಯಾಗಿ ಬಂದಿದ್ದರಿಂದ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಗುವುದು. ವೀಕ್ಷಣೆಗಾಗಿ ಮಹಿಳೆಯರಿಗಾಗಿ ಪ್ರತ್ಯೇಕ ಗ್ಯಾಲರಿ ಮಾಡಲಾಗುವುದು. ಬೆಳಗಾವಿಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಹೋರಾಡಿದ ಮಹನೀಯರ ಭಾವಚಿತ್ರಗಳನ್ನು ಪ್ರದರ್ಶಿಸಲಾಗುವುದು ಹಾಗೂ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅವಕಾಶವಿಲ್ಲ” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X