ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ ನಾಟಕವಾಡಿದ ವಿಚಿತ್ರ ಘಟನೆ ಬೆಳಗಾವಿಯ ಉದ್ಯಮಬಾಗ ಠಾಣೆಯಲ್ಲಿ ನಡೆದಿದೆ.
ಆತ್ಮಹತ್ಯೆ ನಾಟಕವಾಡಿದ ಪೊಲೀಸ್ ಕಾನ್‌ಸ್ಟೆಬಲ್ ಮುದಕಪ್ಪ ಉದಗಟ್ಟಿ. ಮುದಕಪ್ಪಅವರ ಅವಾಂತರದಿಂದಾಗಿ ಠಾಣೆಯ ಪಿಐ ಡಿ ಕೆ ಪಾಟೀಲ್ ಲೋ ಬಿಪಿಯಿಂದ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಘಟನೆ ಬಗ್ಗೆ ಇದೀಗ ಬೆಳಗಾವಿ ಪೊಲೀಸ್ ಆಯುಕ್ತ ಯುಡಾ ಮಾರ್ಟಿನ್ ಅವರಿಗೂ ಮಾಹಿತಿ ನೀಡಲಾಗಿದೆ.
ಕಾನ್‌ಸ್ಟೆಬಲ್ ಮುದಕಪ್ಪ ಎರಡು ದಿನ ರಜೆ ಹೋಗಿ ಬಂದಿದ್ದರು. ಹೀಗಾಗಿ ಅವರಿಗೆ ಪಿಐ ಡ್ಯೂಟಿ ಬದಲಿಸಿದ್ದರು. ಕರ್ತವ್ಯಕ್ಕೆ ನಿಯೋಜಿಸಿದಲ್ಲಿಗೆ ಹೋಗಬೇಕೆಂದು ಸೂಚನೆ ನೀಡಿದ್ದರು. ಆದರೆ ಇದಕ್ಕೆ ಒಪ್ಪದ ಮುದಕಪ್ಪ, ವಿಷ ಸೇವಿಸುತ್ತೇನೆಂದು ಹೇಳಿದ್ದಲ್ಲದೆ ಬಿದ್ದು ಹೊರಳಾಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಯಲಾಗಿದ್ದು, ಆರೋಗ್ಯ ತಪಾಸಣೆ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು, ಬಾಣಂತಿ ಸಾವು: ಮಾಜಿ ಸಚಿವ ಹಾಲಪ್ಪ ಆಚಾರ್
ಕಾನ್‌ಸ್ಟೆಬಲ್ ಮುದಕಪ್ಪ ಅವರ ಆರೋಗಯವನ್ನು ಪರೀಕ್ಷಿಸಿದ ವೈದ್ಯರು, ಮುದಕಪ್ಪ ವಿಷ ಸೇವಿಸಿಲ್ಲವೆಂದು ದೃಢಪಡಿಸಿದ್ದಾರೆ. ಬಳಿಕ ಮೇಲಧಿಕಾರಿಗಳು ಮುದಕಪ್ಪನಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.