ಬೆಳಗಾವಿ | ತಹಶೀಲ್ದಾರ್ ಆಪ್ತ ಸಹಾಯಕ ರುದ್ರಣ್ಣನದ್ದು ಆತ್ಮಹತ್ಯೆಯಲ್ಲ, ಕೊಲೆ: ಪೊಲೀಸ್ ಕಚೇರಿಗೆ ಅನಾಮಧೇಯ ಪತ್ರ!

Date:

Advertisements

ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ’ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇಬಜಾ‌ರ್ ಎಸಿಪಿ ಅವರ ಕಚೇರಿಗೆ ತಲುಪಿರುವ ಬಗ್ಗೆ ವರದಿಯಾಗಿದೆ.

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತಹಶೀಲ್ದಾರ್ ಬಸವರಾಜ ನಾಗರಾಳ, ಎಫ್‌ಡಿಎ ಅಶೋಕ ಕಬ್ಬಲಿಗೇರ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಅವರಿಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೇ, ಈ ಪತ್ರವು ಪೊಲೀಸ್ ಕಚೇರಿಗೆ ಬಂದಿದೆ.

ಬಿಳಿ ಹಾಳೆಯ ಮೇಲೆ ಟೈಪಿಸಿ ಪ್ರಿಂಟ್ ತೆಗೆದು, ಲಕೋಟೆಯಲ್ಲಿ ಹಾಕಿ ಖಡೇಬಜಾ‌ರ್ ಠಾಣೆಗೆ ಪೋಸ್ಟ್ ಮಾಡಲಾಗಿದೆ.

Advertisements

ಇದರ ಪ್ರತಿಗಳನ್ನು ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು ಸೇರಿ ಹಲವರಿಗೆ ಪೋಸ್ಟ್ ಮಾಡಲಾಗಿದೆ ಎಂದೂ ಪತ್ರದಲ್ಲಿ ಪಟ್ಟಿ ನೀಡಿರುವ ಬಗ್ಗೆ ವರದಿಯಾಗಿದೆ.

‘ರುದ್ರಣ್ಣನದು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ. ಅವನು ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದು ವ್ಯವಸ್ಥಿತವಾಗಿ ನಡೆಸಿದ ಕೊಲೆ. ತಹಶೀಲ್ದಾರ್ ಜೀಪ್‌ನ ಚಾಲಕ ಯಲ್ಲಪ್ಪ ಬಡಸದ ಎಂಬಾತನೇ ಕೊಲೆಯ ಸೂತ್ರಧಾರ. ಆ ವಾಹನ ತಪಾಸಿಸಿದರೆ ಮತ್ತು ಯಲ್ಲಪ್ಪನ ವಿಚಾರಣೆ ಮಾಡಿದರೆ, ಕೊಲೆ ರಹಸ್ಯ ಹೊರಬರುತ್ತದೆ. ಯಲ್ಲಪ್ಪನ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡು, ಅವರ ಎಲ್ಲ ದುಡ್ಡು ಹೊಡೆದಿದ್ದಾಳೆ. ಮೃತಪಟ್ಟ ರುದ್ರಣ್ಣನ ಕುಟುಂಬಕ್ಕೆ ನ್ಯಾಯ ಸಿಗಬೇಕು. ಪ್ರಕರಣ ಮುಚ್ಚಿ ಹಾಕಬಾರದು’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಈ‌ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬೆಳಗಾವಿ ಪೊಲೀಸರು, ‘ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಅನಾಮಧೇಯ ಪತ್ರದ ಬಗ್ಗೆ ಪರಿಶೀಲಿಸಲಾಗುವುದು. ಎಲ್ಲ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗುವುದು’ ಎಂದಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

Download Eedina App Android / iOS

X