ಬೆಳಗಾವಿ ತಾಲ್ಲೂಕಿನ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಇಸ್ಲಾಂ ಧರ್ಮಗ್ರಂಥ ಕುರಾನ್ ಮತ್ತು ಹದೀಸ್‌ನ್ನು ಸೋಮವಾರ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಾಧ್ಯಕ್ಷ ಹಬೀಬುಲ್ಲಾ ಖಾನ್ ಅಗ್ರಹಿಸಿದರು.
ರಾಜ್ಯದಲ್ಲಿ ಎಲ್ಲಿಯೂ ಈ ತರದ ಘಟನೆ ನಡೆದಿಲ್ಲ. ಈ ಘಟನೆ ಹಿಂದೆ ಕಾಣದ ಕೈಗಳ ಕೈವಾಡ ಅಡಗಿದೆ. ಈ ಘಟನೆ ಯಾರು ಮಾಡಿದ್ದಾರೆ? ಅವರಿಗೆ ಕುಮ್ಮಕ್ಕು ಕೊಟ್ಟವರು ಯಾರು? ಎಂಬುದನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದರು.
ಇತ್ತೀಚೆಗೆ ರಾಜ್ಯದಲ್ಲಿ ಕೆಲವೊಬ್ಬ ರಾಜಕಾರಣಿಗಳು ಹಾಗೂ ಬಿಜೆಪಿ ಸಂಘ ಪರಿವಾರವೂ ಕೋಮು ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೆಲಸ ಮಾಡ್ತಾ ಇದ್ದಾರೆ. ಇದರ ಪ್ರೇರಣೆಯಿಂದ ಇಂತಹ ಘಟನೆಗಳು ನಡೆಯುತ್ತಿವೆ. ರಾಜಕಾರಣಿಗಳ ಸ್ವಾರ್ಥಕ್ಕಾಗಿ ಅಮಾಯಕ ಜನರು ಬಲಿಯಾಗ್ತಾ ಇದ್ದಾರೆ. ಕೋಮುವಾದಕ್ಕೆ ಪ್ರಚೋದನೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರು ತಪ್ಪಿತಸ್ಥ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಅವರ ವಿರುದ್ದ ಕೋಮು ಪ್ರಚೋದನೆ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಬೆಳಗಾವಿ | ಚರಂಡಿ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ