ಬೆಳಗಾವಿ | ಖಾನಾಪುರ ಪಶ್ಚಿಮ ಭಾಗದ ಕಾಡಂಚಿನ ರೈತರ ಸಮಸ್ಯೆಗಳಿಗೆ ಸ್ಪಂದಿಸಿ: ಸಿದ್ದಗೌಡ ಮೋದಗಿ

Date:

Advertisements

ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡಂಚಿನ ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ರೈತ ಸಂಘಟನೆಯ ಮುಖಂಡ ಸಿದ್ದಗೌಡ ಮೋದಗಿ ಅವರು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಡಂಚಿನ ರೈತರು ವನ್ಯ ಪ್ರಾಣಿಗಳ ಹಾವಳಿಯಿಂದ ಬೆಳೆನಷ್ಟವಾಗಿದ್ದು, ಅರಣ್ಯ ಇಲಾಖೆಯಿಂದ ಪರಿಹಾರ ಬಿಡುಗಡೆಗೊಳಿಸಬೇಕು. ಅರ್ಜಿ ಸಲ್ಲಿಸಿದ ರೈತರಿಗೆ ಇವತ್ತಿನವರೆಗೂ ಏಕೆ ಪರಿಹಾರ ಕೊಟ್ಟಿಲ್ಲಾ ಎಂಬುದರ ಬಗ್ಗೆ ಇಲಾಖೆಯ ಮುಖ್ಯಸ್ಥರು ಉತ್ತರಿಸಬೇಕು” ಎಂದು ಆಗ್ರಹಿಸಿದರು.

“ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾದ ಬೆಳೆನಾಶ. ಮಾನವನ ಪ್ರಾಣಹಾನಿ, ಸಾಕು ಪ್ರಾಣಿಗಳ ಪ್ರಾಣಹಾನಿ, ಆಸ್ತಿ-ಪಾಸ್ತಿ ಹಾನಿ, ಗಾಯಗೊಂಡವರಿಗೆ ನೀಡಲಾಗುತ್ತಿರುವ ಧನ- ಪರಿಹಾರ ಮೊತ್ತವನ್ನು ಪರಿಷ್ಕರಿಸಬೇಕು” ಎಂದು ಒತ್ತಾಯಿಸಿದರು.

Advertisements

“ಈ ಭಾಗದ ಹಳ್ಳಿ ಗ್ರಾಮಗಳ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸುವುದು, ಶಾಲೆ ಕಾಲೇಜು ಮಕ್ಕಳಿಗೆ ಬೆಳಿಗ್ಗೆ, ಮದ್ಯಾಹ್ನ ಮತ್ತು ಸಾಯಂಕಾಲ ಸರಿಯಾದ ಸಮಯಕ್ಕೆ ಬಸ್ಸ್ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮಗಳಿಗೆ ಸಮರ್ಪಕ ಗುಣಮಟ್ಟದ ವಿದ್ಯುತ್ ಸರಬರಾಜು‌ ಮಾಡಬೇಕು. ಈ ಭಾಗದಲ್ಲಿ ಆರೋಗ್ಯ ಪ್ರಾಥಮಿಕ ಕೇಂದ್ರ, ಉಪ ಮಾರುಕಟ್ಟೆ ಕೇಂದ್ರಗಳನ್ನು ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಹಲವು ಇಲಾಖೆಗಳ ಖಾಲಿ ಹುದ್ದೆ ನೇಮಕಕ್ಕೆ ಆಗ್ರಹಿಸಿ ಪತ್ರ ಚಳವಳಿ

“ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ” ಗೃಹಲಕ್ಷ್ಮಿ ಯೋಜನೆ” ನೀರಿಕ್ಷಿತ ಪ್ರಮಾಣದಲ್ಲಿ ಅನುಷ್ಠಾನಗೊಂಡಿರುವುದಿಲ್ಲ. ಕೂಡಲೇ ಅರ್ಹ ಫಲಾನುಭವಿಗಳಿಗೆ ತಲಪುವಂತೆ ವ್ಯವಸ್ಥೆ ಮಾಡಬೇಕು. ತಮ್ಮ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಬೇಕು. ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡುವಂತೆ ರೈತರ ಪರವಾಗಿ ಸರ್ಕಾರಕ್ಕೆ ಪತ್ರ ಬರೆಯಬೇಕು.‌ ಈ ಭಾಗದಲ್ಲಿರುವ ರೆಸಾರ್ಟ್,‌ ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರವುಗೊಳಿಸಲು ತುರ್ತು ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ಈ ಕುರಿತು ಈ ದಿನ.ಕಾಮ್ ಜೊತೆ ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದ್ದಗೌಡ ಮೋದಗಿ ಮಾತನಾಡಿ, “ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟದ ರೈತರ ಸಮಸ್ಯೆಗಳು ಈಡೇರದಿದ್ದಲ್ಲಿ ತಹಶೀಲ್ದಾರ್ ಕಚೇರಿ ಎದುರು ಖಾನಾಪುರ ತಾಲೂಕಿನ ರೈತ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X