ಬೆಳಗಾವಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಮೂಲಕ ಗೂಡ್ಸ್ ವಾಹನದಲ್ಲಿ ಮಹಾರಾಷ್ಟ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ ₹2.73 ಕೋಟಿ ನಗದು ಜಪ್ತಿ ಮಾಡಿದ್ದು, ಬೆಳಗಾವಿ ಸಿಸಿಬಿ ಪೊಲೀಸರು ಆರೋಪಿಗಳನ್ನೂ ವಶಕ್ಕೆ ಪಡೆದಿದ್ದಾರೆ.
ಗೂಡ್ಸ್ ವಾಹನದಲ್ಲಿ ಮಾರ್ಪಾಡು ಮಾಡಿ ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಪತ್ತೆಯಸದ ₹2.73 ಕೋಟಿಯನ್ನು ಜಪ್ತಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ
ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಸಾಂಗ್ಲಿ ಮೂಲದ ಸಚಿನ್ ಮತ್ತು ಮಾರುತಿ ಮಾರಗುಡೆ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.