ಬೆಳಗಾವಿ | ಸಂತೋಷ್‌ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆಗೆ ಗುತ್ತಿಗೆದಾರನ ತಾಯಿ ಮನವಿ

Date:

ನನ್ನ ಮಗನ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಹಾಗಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದೇವೆ‌. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ತಾಯಿ ಪಾರ್ವತಿ ಹೇಳಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಮಗ ಸಂತೋಷನು ಈಶ್ವರಪ್ಪ ಅವರಿಗೆ ಕಮಿಷನ್ ಕೊಟ್ಟಿದ್ದೇವೆ ಎಂದಿದ್ದ. ಆದರೆ, ಈ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಕೊಡಲಾಗಿದೆ. ನನ್ನ ಮಗನಿಗೆ ನ್ಯಾಯ ಸಿಕ್ಕಿಲ್ಲ” ಎಂದು ಕಣ್ಣೀರು ಹಾಕಿದರು.

“ಬಿ ಎಸ್ ಯಡಿಯೂರಪ್ಪ ಅವರಿಗೆ ನನ್ನ ಮಗ ಅಪ್ಪಾಜಿ ಎಂದು ಕರೆಯುತ್ತಿದ್ದ. ಸೊಸೆಗೆ ನೌಕರಿ ಕೊಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದೂ ಈಡೇರಿಲ್ಲ. ಕಾಮಗಾರಿ‌ಗೆ ಕೈಗೊಂಡ ಹಣವನ್ನೂ ಕೊಡಲಿಲ್ಲ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಮರ್ಪಕ ಬಸ್‌ ವ್ಯವಸ್ಥೆಗೆ ಡಿವಿಪಿ ಆಗ್ರಹ

“ಈ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಬಂದ ನಂತರ, ಈಶ್ವರಪ್ಪ ಅವರ ಮನೆಯಲ್ಲಿ ಕುಟುಂಬಸ್ಥರು ಸಿಹಿ ತಿಂದರು. ಅವರಿಗೆ ನಮ್ಮಂತಹ ಪರಿಸ್ಥಿತಿ ಬಂದಿದ್ದರೆ, ಸಿಹಿ ತಿನ್ನುತ್ತಿದ್ದರಾ?” ಎಂದು ಬೇಸರ ವ್ಯಕ್ತಪಡಿಸಿದರು.

“ಮಗ ಆತ್ಮಹತ್ಯೆ ಮಾಡಿಕೊಂಡ ಬಳಿಕ ಈವರೆಗೂ ಬಿಜೆಪಿ ಸರ್ಕಾರದ ಒಬ್ಬ ಪ್ರತಿನಿಧಿಯೂ ನಮ್ಮ ಮನೆಗೆ ಭೇಟಿ ನೀಡಿಲ್ಲ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರುತನಿಖೆ ನಡೆಸುತ್ತೇವೆ ಎಂದಿದ್ದಾರೆ. ಅವರು ಏನು ಮಾಡುತ್ತಾರೆಯೇ ನೋಡೋಣ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...