ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾ ವಾಲ್ಮೀಕಿ ಸಮಾಜವು ಜಿಲ್ಲಾಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನವನ್ನು ಹಮ್ಮಿಕೊಂಡಿತ್ತು. ಈ ಸಮ್ಮೇಳನದಲ್ಲಿ ‘ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿ’ ಎಂದು ನಿರ್ಣಯ ಅಂಗೀಕರಿಸಲಾಗಿದೆ.
ಸಮ್ಮೇಳನವನ್ನುದ್ದೇಶಿಸಿ ಮಹಾರಾಷ್ಟ್ರದ ವಾಲ್ಮೀಕಿ ಮುಖಂಡ ವಸಂತರಾವ್ ಚವ್ಹಾಣ ಮಾತನಾಡಿ , “ಹಿಂದುಳಿದ ಸಮಾಜದ ಧ್ವನಿಯಾಗಿರುವ ಸತೀಶ ಜಾರಕಿಹೊಳಿ ವಾಲ್ಮೀಕಿ ಸಮುದಾಯದ ಪ್ರಗತಿಗೆ ನಿರಂತರವಾಗಿ ಶ್ರಮಿಸಿದ್ದಾರೆ. ನಮ್ಮ ಸಮುದಾಯದವರೆಲ್ಲ ಅವರಿಗೆ ಸಹಕಾರ ನೀಡಬೇಕು. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವ ಕಾಲ ಕೂಡಿಬಂದಿದೆ. ಸದ್ಯದಲ್ಲೇ ಮುಖ್ಯಮಂತ್ರಿ ಆಗಲಿದ್ದಾರೆ” ಎಂದು ಹೇಳಿದರು.
ಬೆಳಗಾವಿ ಜಿಲ್ಲಾ ವಾಲ್ಮೀಕಿ ಸಮಾಜದ ಅಧ್ಯಕ್ಷ ರಾಜಶೇಖರ ತಳವಾರ ಮಾತನಾಡಿ, “ವಾಲ್ಮೀಕಿ ಸಮುದಾಯಕ್ಕೆ ಸೇರಿದ ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿ ಆಗಲಿ ಎಂಬ ನಿರ್ಣಯವನ್ನು ವಾಲ್ಮೀಕಿ ಸಮ್ಮೇಳನದಲ್ಲಿ ಅಂಗೀಕರಿಸಲಾಗಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಜೀವ ಕಳೆದುಕೊಳ್ಳುವ ಹಂತದಲ್ಲಿದೆ ಐತಿಹಾಸಿಕ ಮಳಖೇಡ ಕೋಟೆ
ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
