ಬೆಳಗಾವಿ ಅಧಿವೇಶನ | ಚರ್ಚೆಗೆ ಬಾರದ ಗಡಿ ವಿವಾದ: ಎಂಇಎಸ್ ತಕರಾರಿಗೆ ಪರಿಹಾರ ಯಾವಾಗ?

Date:

Advertisements

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನ ಪ್ರಾರಂಭವಾಗಿ ಇಷ್ಟು ದಿನಗಳು ಕಳೆದಿದ್ದರೂ ರಾಜ್ಯದ ಗಡಿವಿವಾದವು ಈವರೆಗೆ ಚರ್ಚೆಗೇ ಬಂದಿಲ್ಲ.

ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದವಿದೆ. ಗಡಿ ವಿವಾದ ವಿಷಯವನ್ನು ಜೀವಂತವಾಗಿ ಇರಿಸಲು ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ಎಂಇಎಸ್ ಪ್ರಯತ್ನಿಸುತ್ತಲೇ ಇದೆ. ಅದಕ್ಕಾಗಿ ಅಧಿವೇಶನ ಪ್ರಾರಂಭವಾದ ಮೊದಲ ದಿನವೇ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಹಾಗೂ ಮಹಾರಾಷ್ಟ್ರದ ಶಿವಸೇನಾ ಮುಖಂಡರು ಪ್ರತಿಭಟನೆ ನಡೆಸಿದ್ದರು. ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿ ಎಂಇಎಸ್‌ ಹಾಗೂ ಶಿವಸೇನೆ ಒಂದಾಗಿ ತನ್ನ ಹಳೆಯ ಚಾಳಿಯನ್ನು ಮುಂದುವರಿಸುತ್ತಲೇ ಇದೆ. ಆದರೂ ಇದಕ್ಕೆ ಈವರೆಗೆ ಬ್ರೇಕ್ ಬಿದ್ದಿಲ್ಲ.

ಕೊಟ್ಟ ಮಾತಿಗೆ ತಪ್ಪಿದ ಮಹಾರಾಷ್ಟ್ರ ಸರ್ಕಾರ

Advertisements

‘ಮರಾಠಿಗರ ರಕ್ಷಣೆಯ ನೇತಾರರು’ ಎಂದು ಹೇಳಿಕೊಳ್ಳುವ ಎಂಇಎಸ್ ಬೆಳಗಾವಿಯಲ್ಲಿ ತನ್ನ ಹುಚ್ಚಾಟದ ಮೂಲಕ ದೇಶದ ಜನತೆಯ ಮುಂದೆ ನಗೆಪಾಟಲಿಗೀಡಾಗುತ್ತಿದ್ದರೂ ಬುದ್ಧಿ ಬಂದಂತೆ ಕಾಣುತ್ತಿಲ್ಲ‌.

1966ರಲ್ಲಿ ಕೊಟ್ಟ ಮಾತಿಗೆ ತಪ್ಪಿ ನಡೆದಿದ್ದ ಮಹಾರಾಷ್ಟ್ರವು ಗಡಿ ವಿಷಯವಾಗಿ ಮರಾಠಿಗರನ್ನು ಭಾವನಾತ್ಮಕವಾಗಿ ಕೆರಳಿಸಿ ಬೆಳಗಾವಿ ಗಡಿ ವಿಷಯವನ್ನು ತನ್ನ ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ.

ಸ್ವಾತಂತ್ರ್ಯ ನಂತರ ರಾಜ್ಯಗಳನ್ನು ಭಾಷೆಯ ಆಧಾರದಲ್ಲಿ ವಿಂಗಡಿಸಲು 1953 ಡಿಸೆಂಬರ್ 22ರಂದು ಕೇಂದ್ರ ಸರ್ಕಾರವು ನೇಮಿಸಿದ್ದ ಫಝಲ್ ಅಲಿ ಅವರ ನೇತೃತ್ವದ ರಾಜ್ಯಗಳ ಪುನರ್ ವಿಂಗಡನಾ ಆಯೋಗ 1955 ಡಿಸೆಂಬರ್ 14ರಂದು ನೀಡಿದ ವರದಿಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಿತ್ತು. ಈ ವರದಿಯ ಅನ್ವಯ ಆಗಿನ ಬಾಂಬೆ ಪ್ರಾಂತ್ಯದ ಭಾಗವಾಗಿದ್ದ ಬೆಳಗಾವಿ ಕರ್ನಾಟಕಕ್ಕೆ ಸೇರಿತು. ಅಂದಿನಿಂದ ಮಹಾರಾಷ್ಟ್ರದ ರಾಜಕಾರಣಿಗಳು ಬೆಳಗಾವಿ ಗಡಿ ವಿಷಯವನ್ನು ವೋಟ್ ಬ್ಯಾಂಕ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಲೇ ಬಂದಿದ್ದಾರೆ.

WhatsApp Image 2024 12 12 at 6.04.27 PM

ಬೆಳಗಾವಿ ಕರ್ನಾಟಕದ ಭಾಗವಾದ ಬಳಿಕ ಮಹಾರಾಷ್ಟ್ರವು ಗಡಿ ತಕರಾರು ಇತ್ಯರ್ಥಗೊಳಿಸಬೇಕು ಎಂದು ಹೋರಾಟವನ್ನು ಪ್ರಾರಂಭ ಮಾಡಿತು.

ಮಹಾರಾಷ್ಟ್ರದ ನಾಯಕ ಸೇನಾಪತಿ ಬಾಪಟ್ ಅಮರಣಾಂತ ಉಪವಾಸ ಕೈಗೊಂಡ ಕಾರಣ ಮಹಾರಾಷ್ಟ್ರದಲ್ಲಿ ಹೋರಾಟ ತೀವ್ರಗೊಂಡು ಅಂದಿನ ಕೇಂದ್ರ ಸರ್ಕಾರ 1966ರ ಅಕ್ಟೋಬರ್ ತಿಂಗಳಲ್ಲಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಪಂಜಾಬ ಮೂಲದ ಮೆಹರ್ ಚಂದ್ ಮಹಾಜನ್ ನೇತೃತ್ವದಲ್ಲಿ ಆಯೋಗ ರಚನೆ ಮಾಡಿತು. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ವಿ.ಪಿ.ನಾಯಕ್ ಅವರು ಮಹಾಜನ್ ಆಯೋಗದ ವರದಿಯಲ್ಲಿ ಏನೇ ಇದ್ದರೂ ಮಹಾರಾಷ್ಟ್ರ ಸರ್ಕಾರ ಅದಕ್ಕೆ ಬದ್ಧವಾಗಿರಲಿದೆ ಎಂದು ಮಾತು ಕೊಟ್ಟಿದ್ದರು. ಆದರೆ ಮಹಾಜನ್ ಆಯೋಗವು ಗಡಿ ಪ್ರದೇಶದ ಗ್ರಾಮಗಳಲ್ಲಿ ಅಧ್ಯಯನ ಮಾಡಿ 1967ರ ಆಗಸ್ಟ್ ತಿಂಗಳಿನಲ್ಲಿ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು.

ಈ ಮಹಾಜನ್ ವರದಿಯ ಅನ್ವಯ 247 ಹಳ್ಳಿಗಳು ಸೇರಿದಂತೆ ಬೆಳಗಾವಿ ಕೂಡ ಕರ್ನಾಟಕಕ್ಕೆ ಸೇರಬೇಕು ಹಾಗೂ ಬೆಳಗಾವಿ, ಖಾನಾಪೂರ, ಚಿಕ್ಕೋಡಿ, ಹುಕ್ಕೇರಿ, ನಿಪ್ಪಾಣಿ ತಾಲೂಕುಗಳ ಒಟ್ಟು 214 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವರದಿಯನ್ನು ನೀಡಿದಾಗ ಕರ್ನಾಟಕ ಸರ್ಕಾರ ಮಹಾಜನ ಆಯೋಗದ ವರದಿಯನ್ನು ಒಪ್ಪಿಕೊಂಡಿತು. ಆದರೆ ಮಹಾಜನ್ ವರದಿಯಲ್ಲಿ ಏನೇ ಇದ್ದರೂ ಒಪ್ಪಿಕೊಳ್ಳುವುದಾಗಿ ಹೇಳಿದ್ದ ಮಹಾರಾಷ್ಟ್ರವು ಮಹಾಜನ್ ಆಯೋಗದ ವರದಿಯನ್ನು ತಿರಸ್ಕರಿಸಿ, ಕೊಟ್ಟ ಮಾತಿಗೆ ತಪ್ಪಿ ನಡೆದು ದೇಶದ ಜನತೆಯ ಮುಂದೆ ವಚನ ಭ್ರಷ್ಟರಾಗಿ ನಿಲ್ಲುವಂತಾಯಿತು. ಅಂದಿನಿಂದ ಇಂದಿನವರೆಗೂ ಎಂಇಎಸ್ ತನ್ನ ಮೊಂಡುವಾದದ ಮೂಲಕ ಗಡಿ ತಕರಾರು ತೆಗೆದು ಗಡಿ ಭಾಗದ ಕನ್ನಡ ಮತ್ತು ಮರಾಠಿ ಭಾಷಿಕರ ನಡುವಿನ ಸಾಮರಸ್ಯವನ್ನು ಹಾಳು ಮಾಡಿ ತನ್ನ ರಾಜಕೀಯ ಬೆಳೆಯನ್ನು ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಬೆಳಗಾವಿಯಲ್ಲಿ ರಾಜಕೀಯ ಅಸ್ತಿತ್ವ ಕಳೆದುಕೊಂಡ ಎಂಇಎಸ್

1962ರ ಕರ್ನಾಟಕ ವಿಧಾನ ಸಭೆಗೆ ಬೆಳಗಾವಿ ಜಿಲ್ಲೆಯ ಖಾನಾಪೂರ, ನಿಪ್ಪಾಣಿ ಹಾಗೂ ಬೆಳಗಾವಿಯ ಮೂರು ವಿಧಾನ ಕ್ಷೇತ್ರಗಳಲ್ಲಿ 5 ಜನ ಎಂಇಎಸ್ ಶಾಸಕರು ಆಯ್ಕೆಯಾಗಿದ್ದರು. 1999ರ ನಂತರದ ವಿಧಾನಸಭಾ ಚುನಾವಣೆಗಳಲ್ಲಿ ಎಂಇಎಸ್ ಬೆಳಗಾವಿ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಾ ಬಂದಿದ್ದು,ಕರಾಳ ದಿನಾಚರಣೆ ಮತ್ತು ಮಹಾ ಮೇಳಾವ್ ಮೂಲಕ ತನ್ನ ರಾಜಕೀಯ ಅಸ್ತಿತ್ವವನ್ನು ಹೊಂದಲು ನಾಡದ್ರೋಹ ಕೆಲಸದ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಬೆಗವಿ

ಈ ಕುರಿತು ಈ ದಿನ.ಕಾಮ್ ಜೊತೆ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಮಾತನಾಡಿ, “ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಕೆಲವು ಎಂಇಎಸ್ ನಾಯಕರು ರಾಜಕೀಯ ಲಾಭಕ್ಕಾಗಿ ಗಡಿ ವಿಷಯ ಬಳಸಿಕೊಳ್ಳುತ್ತಿದ್ದಾರೆ ಜಿಲ್ಲೆಯ ಕೆಲವು ರಾಜಕಾರಣಿಗಳು ಮರಾಠಿಗರ ಮತಕ್ಕಾಗಿ ಅವರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಅಧಿವೇಶನದಲ್ಲಿ ಆಗಬೇಕಾದ್ದೇನು | ಮರಾಠಿ ಮುಂದೆ ಮುಂದೆ, ಕನ್ನಡ ತೀರಾ ಹಿಂದೆ; ಗಡಿನಾಡಲ್ಲಿ ಕನ್ನಡ ಅವಸ್ಥೆ ಶೋಚನೀಯ

ಗಡಿನಾಡು ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಆದರೆ, ಗಡಿವಿವಾದವು ಚರ್ಚೆಯಾಗಬೇಕಿದೆ. ಜೊತೆಗೆ, ರಾಜ್ಯ ಸರ್ಕಾರವು ಈ ಚಳಿಗಾಲದ ಅಧಿವೇಶನದಲ್ಲಿ ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ಬೆಳಗಾವಿ ಗಡಿಭಾಗದ ಜನತೆಯ ಆಶಯವಾಗಿದೆ.

ಡಿ. 9ರಿಂದ 20 ವರೆಗೆ ನಿಷೇಧಾಜ್ಞೆ ಜಾರಿ

ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಅವರು ಈ ಭಾಗದಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 9 ರಿಂದ 20 ವರೆಗೆ ಅಂದರೆ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X