ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸುಧಾರಿಸಲು ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗಿದೆ ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ನೇತೃತ್ವ ವಹಿಸಿರುವ ಕಿರಣ್ ಬೇಡಿ ತಿಳಿಸಿದರು.
ಬೆಳಗಾವಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಸ್ಥಾಪನೆಯಾಗಿರುವ ನಮ್ಮ ಕ್ಲಿನಿಕ್‌ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯದಲ್ಲಿ ತೊಂದರೆಯಾದರೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬಹುದು. ವಿಶ್ರಾಂತಿಯನ್ನೂ ಪಡೆಯಬಹುದು. ಜೊತೆಗೆ ಲಿಂಗತ್ವ ಬದಲಾವಣೆ ಬಯಸುವವರಿಗೆ ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆಯನ್ನೂ ಮಾಡಲಾಡುತ್ತದೆ” ಎಂದು ತಿಳಿಸಿದರು.
ಈ ದಿನ.ಕಾಮ್ನೊಂದಿಗೆ ಮಾತನಾಡಿದ ಕಿರಣ್ ಬೇಡಿ, “ಮಾನಸಿಕವಾಗಿ ಖಿನ್ನತೆಗೊಳದವರಿಗೆ ಮಾನಸಿಕ ತಜ್ಞರಿಂದ ಆಪ್ತಸಮಾಲೋಚನೆ ಮಾಡಲಾಗುತ್ತದೆ. ಹಾರ್ಮೋನ್‌ಗಳ ತೊಂದರೆಯಿಂದ ಮಾನಸಿಕ ಕಿನ್ನತೆಗೆ ಒಳಗಾದಾಗ ಅವರಿಗೆ ಆಪ್ತಸಮಾಲೋಚನೆ ಮಾಡಿ, ಅವರನ್ನು ಆರೋಗ್ಯವಂತರನ್ನಾಗಿ ಮಾಡಲು, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳನ್ನು ಕೇಳಲು, ಅವರಿಗೆ ವಿಶ್ರಾಂತಿ ಪಡೆಯಲು ಅನುಕೂಲವಾಗಲಿದೆ. ನಗರದಲ್ಲಿ ನಮ್ಮ ಕ್ಲಿನಿಕ್ ಸ್ಥಾಪಿಸಿರುವುದು ಲಿಂಗತ್ವ ಅಲ್ಪಸಂಖ್ಯಾತ ಸಮುದಯಾದವರಿಗೆ ಒಳ್ಳೆಯ ರೀತಿಯಲ್ಲಿ ಉಪಯೋಗವಾಗಬೇಕಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗ್ರಾಮದ ಜನರಲ್ಲಿ ವಾಂತಿ-ಭೇದಿ; ಐವರು ಆಸ್ಪತ್ರೆಗೆ ದಾಖಲು
ಕಾರ್ಯಕ್ರಮದಲ್ಲಿ ಎಸಿಪಿ ಸ್ನೇಹಾ, ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ರುಕ್ಮಿಣಿ, ಸಂಗಮ ಸಂಸ್ಥೆಯ ನಿರ್ಧೇಶಕ ರಾಜು, ಹ್ಯುಮ್ಯಾನಿಟಿ ಸಂಸ್ಥೆಯ ತಾನಾಜಿ ಸಾಬ್, ಸಂಗಮ ಸಂಸ್ಥೆಯ ಪ್ರಭಾವತಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಇದ್ದರು.