ಬೆಳಗಾವಿ–ಕಿತ್ತೂರು–ಧಾರವಾಡ ನಡುವೆ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ್ ಮನವಿ ಪತ್ರ ಸಲ್ಲಿಸಿದರು.
ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಬೆಳಗಾವಿ–ಕಿತ್ತೂರು–ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಕುರಿತು ಸುದೀರ್ಘವಾಗಿ ಚರ್ಚಿಸಿದರು.
“ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯ ನಂತರವೂ ರಾಜ್ಯ ಸರ್ಕಾರದಿಂದ ಯಾವುದೇ ಭೂಮಿಯನ್ನು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿಲ್ಲ. ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಅನುಷ್ಠಾನ ತುಂಬಾ ಅಗತ್ಯವಿದೆ. ಈ ಯೋಜನೆಯನ್ನು ಶೀಘ್ರವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ನೈರುತ್ಯ ರೈಲ್ವೆ ಇಲಾಖೆಗೆ ಅಗತ್ಯವಿರುವ ಭೂಮಿಯನ್ನು ತ್ವರಿತವಾಗಿ ಹಸ್ತಾಂತರಿಸಲು ಕರ್ನಾಟಕ ಸರ್ಕಾರಕ್ಕೆ ಆರಂಭಿಕ ಕ್ರಮಗಳನ್ನು ಪ್ರಾರಂಭಿಸಲು ನಿರ್ದೇಶನ ನೀಡಬೇಕು” ಎಂದು ಮನವಿ ಮಾಡಿದರು.
ಬೆಳಗಾವಿಯಲ್ಲಿ ಮರು ರೂಪಿಸಲಾದ ಹೊಸ ರೈಲು ನಿಲ್ದಾಣವು ಎಲ್ಲ ರೀತಿಯ ನೂತನ ಸೌಲಭ್ಯಗಳನ್ನು ಹೊಂದಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ನಿವಾಸಿಗಳ ಬೇಡಿಕೆಯ ಆಧಾರದ ಮೇರೆಗೆ ಹೊಸ ರೈಲುಗಳನ್ನು ಪರಿಚಯಿಸಲು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೆರೆ ಹಾಗೂ ಚೆಕ್ ಡ್ಯಾಮ್‌ಗಳಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ ವಿರುದ್ಧ ರೈತ ರೇವಣ್ಣ ಉಪವಾಸ ಸತ್ಯಾಗ್ರಹ
ಬೆಳಗಾವಿ-ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್, ಬೆಳಗಾವಿ-ಪುಣೆ-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್, ಬೆಳಗಾವಿ-ಅಯೋಧ್ಯೆ ಬೆಳಗಾವಿ, ಬೆಳಗಾವಿ-ಪಂಡರಾಪುರ-ಬೆಳಗಾವಿ, ಬೆಳಗಾವಿಯಲ್ಲಿ ವಾಸಿಸುವ ಮಲಯಾಳಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿ-ಕೊಚ್ಚಿವೆಲ್ಲಿ-ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ಅನ್ನು ಬೆಳಗಾವಿಯವರೆಗೆ ವಿಸ್ತರಿಸುವಂತೆ ಶೆಟ್ಟರ್ ಮನವಿ ಮಾಡಿದ್ದಾರೆ.
