ಬೆಳಗಾವಿಯ ಮಹಾಂತೇಶ ನಗರದಲ್ಲಿ ಕೆಎಂಎಫ್ ಡೈರಿಯ ಬಳಿ ಗುಂಡಿನ ದಾಳಿ ನಡೆದಿದ್ದು, ಯುವಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಕೆಎಂಎಫ್ ಡೈರಿ ಬಳಿ ಟಿಳಕವಾಡಿಯ ದ್ವಾರಕಾನಗರ ಐದನೇ ಕ್ರಾಸ್‌ನ ನಿವಾಸಿ ಪ್ರಣೀತ್ ಕುಮಾರ್ ಎಂಬುವವನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗಂಭೀರ ಗಾಯಗೊಂಡ ಆತನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನಿರ್ಗತಿಕ ಅಜ್ಜಿಯ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವು
ವೈಯಕ್ತಿಕ ದ್ವೇಷದ ಹಿನ್ನೆಲೆ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮಾಳ ಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.