ಬೆಳಗಾವಿ | ಇ-ಸ್ವತ್ತು ದಾಖಲೆ ನಿಯಮ ಸರಳೀಕರಣ; ತ್ವರಿತ ಸ್ಪಂದನೆಗೆ ಸೂಚನೆ

Date:

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು ಇ-ಸ್ವತ್ತು ದಾಖಲೆ ಪಡೆಯಲು ಎದುರಿಸುತ್ತಿರುವ ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ನಿಯಮಗಳನ್ನು ಸರಳೀಕರಣಗೊಳಿಸಿದೆ. ಹೀಗಾಗಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ದಾಖಲೆ ನೀಡುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒಗಳು) ವಿಳಂಬ ಮಾಡದೆ, ಜನಸಾಮಾನ್ಯರಿಗೆ ತ್ವರಿತವಾಗಿ ಸೇವೆ ಒದಗಿಸಬೇಕು ಎಂದು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಬೆಳಾಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. “ಇ-ಸ್ವತ್ತು ದಾಖಲೆ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರಿಗೆ ತೊಂದರೆಯಾಗಬಾರದು. ಸಾರ್ವಜನಿಕರ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಕಚೇರಿಗೆ ಬರುವ ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

“ಕುಡಿಯುವ ನೀರಿನ ವಿಚಾರದಲ್ಲಿ ನಿರ್ಲಕ್ಷ್ಯ ಬೇಡಮಳೆ ಪ್ರಮಾಣದಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಅಂತರ್ಜಲ ಮಟ್ಟ ಕುಸಿದು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಮದುರ್ಗ ತಾಲೂಕಿನ ಯಾವುದೇ ಗ್ರಾಮದಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯ ವ್ಯವಸ್ಥೆಗಳನ್ನು ಈಗಿನಿಂದಲೇ ಸಿದ್ಧಪಡಿಸಿಕೊಳ್ಳಬೇಕು. ಗ್ರಾಮಗಳಲ್ಲಿನ ಜಾನುವಾರುಗಳಿಗೂ ನೀರಿನ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ನಿರ್ದೇಶನ ನೀಡಿದರು.

“8,1,242 ಆಸ್ತಿಗಳಿಗೆ ಇ-ಸ್ವತ್ತು ಗುರಿಸಭೆಯಲ್ಲಿ ತಾಲೂಕು ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಇಜಾನ್ ಸುಬೂರ ಅವರು ಇ-ಸ್ವತ್ತು ಪ್ರಗತಿಯ ಮಾಹಿತಿ ನೀಡಿದರು. ರಾಮದುರ್ಗ ತಾಲೂಕಿನಲ್ಲಿ ಒಟ್ಟು 81,242 ಆಸ್ತಿಗಳಿಗೆ ಇ-ಸ್ವತ್ತು ದಾಖಲೆ ನೀಡಬೇಕಿದೆ. ಈ ಪೈಕಿ 39,643 ಗ್ರಾಮ ಠಾಣಾ ಆಸ್ತಿಗಳಿದ್ದು, ಸುಮಾರು 12 ಸಾವಿರ ಸ್ವಂತ ಆಸ್ತಿಗಳಿವೆ. ಹಕ್ಕುಪತ್ರ ನೀಡಿರುವ 3,079 ಆಸ್ತಿಗಳು ಹಾಗೂ ಭೂ ಪರಿವರ್ತನೆಗೊಂಡ 633 ಆಸ್ತಿಗಳಿವೆ. ಇನ್ನುಳಿದ ಆಸ್ತಿಗಳ ದಾಖಲಾತಿ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಿ, ಮುಂದಿನ ಮೂರು ತಿಂಗಳಲ್ಲಿ ಇ-ಸ್ವತ್ತು ಕಾರ್ಯವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ” ಎಂದು ತಿಳಿಸಿದರು.

ಅರಣ್ಯ ಪ್ರದೇಶದ ಮನೆಗಳ ಸಮಸ್ಯೆಗೆ ಅಧಿವೇಶನದಲ್ಲಿ ಧ್ವನಿತಾಲೂಕಿನಲ್ಲಿ ಭಾರತ್ ಜೋಡೋ ಸಂಘಟನೆಗಳ ರಚನೆ ಹಾಗೂ ವಿವಿಧ ವಸತಿ ಯೋಜನೆಗಳ ಅನುಷ್ಠಾನದ ಪ್ರಗತಿಯ ಬಗ್ಗೆಯೂ ಅಶೋಕ ಪಟ್ಟಣ ಮಾಹಿತಿ ಪಡೆದರು. ಅರಣ್ಯ ಪ್ರದೇಶದಲ್ಲಿ ಈಗಾಗಲೇ ಮನೆಗಳನ್ನು ನಿರ್ಮಿಸಿಕೊಂಡಿರುವ ಕುಟುಂಬಗಳ ಸಂಪೂರ್ಣ ವಿವರಗಳನ್ನು ಅಧಿಕಾರಿಗಳು ಸಂಗ್ರಹಿಸಿ ಸಲ್ಲಿಸಬೇಕು. ಈ ಕುಟುಂಬಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.ಜನರಿಗೆ ಮೂಲಸೌಕರ್ಯ ಮತ್ತು ಸರ್ಕಾರಿ ಸೇವೆಗಳನ್ನು ತಲುಪಿಸುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಹೊಣೆಗಾರಿಕೆ ಮಹತ್ವದ್ದಾಗಿದ್ದು, ಕೇವಲ ಸಭೆಗಳಿಗೆ ಸೀಮಿತವಾಗದೆ ಕ್ಷೇತ್ರಮಟ್ಟದಲ್ಲಿ ಕೆಲಸ ಮಾಡಬೇಕು ಎಂಬ ಸ್ಪಷ್ಟ ಸಂದೇಶವನ್ನು ಸಭೆಯ ಮೂಲಕ ರವಾನಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ...

7,300 ಕೋರ್ಟ್‌ಗಳ ಖಾಲಿ ಕುರ್ಚಿಗಳ ನಡುವೆ ನ್ಯಾಯಕ್ಕಾಗಿ ಕಾಯುತ್ತಿರುವ 5.8 ಕೋಟಿ ಪ್ರಕರಣಗಳು!

"ನ್ಯಾಯ ವಿಳಂಬವಾದರೆ ಅದು ನ್ಯಾಯ ನಿರಾಕರಣೆಗೆ ಸಮ" ಎಂಬ ಮಾತಿದೆ. ಆದರೆ...

ಭದ್ರಾವತಿ | ಆಶ್ರಿತ ಸಂಸ್ಥೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ

ಭದ್ರಾವತಿಯ ನ್ಯೂಟೌನ್ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಶ್ರಿತ ಸಂಸ್ಥೆ ಮತ್ತು...

ಮರಣದಂಡನೆಗೆ ಜಾಗತಿಕ ತಡೆ; ವಿಶ್ವಸಂಸ್ಥೆಯ ನಿರ್ಣಯದ ವಿರುದ್ಧ ಮತ ಚಲಾಯಿಸಿದ ಭಾರತ!

ಮರಣದಂಡನೆ ಶಿಕ್ಷೆಗೆ ಜಾಗತಿಕವಾಗಿ ತಾತ್ಕಾಲಿಕ ತಡೆ ಹೇರುವಂತೆ ಎಲ್ಲ ರಾಷ್ಟ್ರಗಳಿಗೆ ಕರೆ...