ಬೆಳಗಾವಿ | ಅಕ್ರಮ ಹಣ ಸಾಗಾಟ; ಖಾಸಗಿ ಬಸ್‌ ವಶ

Date:

  • ಖಾಸಗಿ ಬಸ್ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು
  • ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ

ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸನ್ನು ಚುನಾವಣಾ ಎಫ್‌ಎಸ್‌ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ. 

“ಖಾಸಗಿ ಬಸ್‌ನಲ್ಲಿ ಹಣ ಸಾಗಾಟ ಮಾಡುತ್ತದ್ದುದಕ್ಕೆ ಸಂಬಂಧಿಸಿದಂತೆ ʼದಾಖಲೆ ಇಲ್ಲದ ಹಣ ಸಾಗಣೆʼ ಪ್ರಕರಣ ದಾಖಲಿಸಿಕೊಂಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ‌ ಮಾಹಿತಿ ನೀಡಲಾಗಿದೆ. ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ” ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಪರಸ್ಪರ ಹೊಡೆದಾಡಿಕೊಂಡ ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್‌ಎಸ್‌ಟಿ ತಂಡದ ಮುಖ್ಯಸ್ಥ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ...

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ಧರಣಿ

ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ...

ಬೆಳಗಾವಿ | ಅಧಿವೇಶನದಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಡಿ.4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವವರಿಗೆ ವಸತಿ,...

ಚಿಕ್ಕಮಗಳೂರು | ಠಾಣೆಯಲ್ಲಿ ಕೂಡಿಹಾಕಿ ಯುವ ವಕೀಲನಿಗೆ ಥಳಿತ; ಪಿಎಸ್‌ಐ ಸೇರಿ 6 ಮಂದಿ ಅಮಾನತು

ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನೋರ್ವನನ್ನು ಠಾಣೆಯಲ್ಲಿ ಕೂಡಿಹಾಕಿ...