ಬೆಳಗಾವಿ | ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ತಹಶೀಲ್ದಾರ್ ಆಪ್ತ ಸಹಾಯಕ

Date:

Advertisements

ತಹಶೀಲ್ದಾರ್ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ಮಂಗಳವಾರ ನಡೆದಿದೆ.

ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ ಎಂದು ಗುರುತಿಸಲಾಗಿದೆ.

ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಈಗ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿಯೇ ರುದ್ರಣ್ಣ ನೇಣಿಗೆ ಶರಣಾಗಿದ್ದಾರೆ. ಮಂಗಳವಾರ ಬೆಳಗ್ಗೆ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಕಚೇರಿ ತೆರೆದಾಗಲಷ್ಟೇ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

Advertisements

ಮೇಲಧಿಕಾರಿಗಳ ಕಿರುಕುಳ ಆರೋಪ ಕೇಳಿಬಂದಿದ್ದು, ಇದರಿಂದ ಬೇಸತ್ತು ಈ ರೀತಿಯಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ನೈಜ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರುದ್ರಣ್ಣ ಯಡವಣ್ಣವರ ತಂದೆ ಕೂಡ ಸರ್ಕಾರಿ ಉದ್ಯೋಗದಲ್ಲಿದ್ದಾಗಲೇ ಮೃತಪಟ್ಟಿದ್ದರಿಂದ ಅನುಕಂಪದ ಆಧಾರದ ಮೇಲೆ ಇವರಿಗೆ ಉದ್ಯೋಗ ದೊರಕಿತ್ತು.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮೆಕ್ಕೆಜೋಳ ಬೆಲೆ ಕುಸಿತ; ಬೆಂಬಲ ಬೆಲೆಗೆ ರೈತರ ಆಗ್ರಹ

ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಮತ್ತು ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಖಡೇಬಜಾ‌ರ್ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಬೆಳಗಾವಿ ಡಿಸಿಪಿ ಜಗದೀಶ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಇದುವರೆಗೂ ಡೆತ್‌ನೋಟ್ ಸಿಕ್ಕಿಲ್ಲ” ಎಂದು ತಿಳಿಸಿದ್ದಾರೆ.

ಸಾವಿಗೂ ಮುನ್ನ ವಾಟ್ಸಪ್ ಸಂದೇಶ

ರುದ್ರಣ್ಣ ಯಡವಣ್ಣವರ ಸಾವಿಗೂ ಮುನ್ನ ಸಂದೇಶವೊಂದನ್ನು ಹಾಕಿದ್ದು, ಇದರಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಮತ್ತು ತಹಶೀಲ್ದಾರ್​ ಹೆಸರು ಉಲ್ಲೇಖಿಸಿದ್ದಾರೆ.

33 6

“ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ ನಾಗರಾಳ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಹಾಗೂ ಅಶೋಕ್ ಕಬ್ಬಳಿಗೇರಾ ಅವರು ಕಾರಣ. ನಮ್ಮ ಕಚೇರಿಯಲ್ಲಿ ತುಂಬಾ ಅನ್ಯಾಯ ನಡೆಯುತ್ತಿದೆ. ದಯವಿಟ್ಟು ಎಲ್ಲರೂ ಹೋರಾಡಿ” ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 7.30ರ ವೇಳೆಗೆ ಈ ಸಂದೇಶ ರವಾನಿಸಿರುವುದಾಗಿ ತಿಳಿದುಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X