ಬೆಳಗಾವಿ | ಮಹಾ ಕುಂಭಮೇಳದ ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಬಿಡುಗಡೆ

Date:

ಪ್ರಯಾಗ್​ರಾಜ್ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ದುರ್ಮರಣ ಹೊಂದಿದ ಬೆಳಗಾವಿಯ ನಾಲ್ವರ ಕುಟುಂಬಸ್ಥರಿಗೆ ಉತ್ತರಪ್ರದೇಶ ಸರ್ಕಾರ ತಲಾ ₹25 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪ್ರಯಾಗ್‌ರಾಜ್ ಜಿಲ್ಲಾಧಿಕಾರಿ ರವಿ ಮಂದರ್ ಅವರ ಜತೆಗೆ ಮಾತುಕತೆ ನಡೆಸಿ ಮೃತರಾದ ಜ್ಯೋತಿ ಹತ್ತರವಾಟ, ಮೇಘಾ ಹತ್ತರವಾಟ, ಮಹಾದೇವಿ ಬಾವನೂರ, ಅರುಣ ಕೋಪರ್ಡೆ‌ ಅವರ ಕುಟುಂಬಸ್ಥರ ಖಾತೆಗಳಿಗೆ ನೇರವಾಗಿ ಪರಿಹಾರ ಧನ ಜಮೆಯಾಗಿದೆ. ನಾವು ಗ್ರಾಮಲೆಕ್ಕಾಧಿಕಾರಿ ಮೂಲಕ ಪರಿಶೀಲಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಮೃತದೇಹಗಳ ವರದಿಯಲ್ಲಿ ಒಂದಿಬ್ಬರ ಹೆಸರಿನಲ್ಲಿ ಅಕ್ಷರದೋಷ ಕಂಡು ಬಂದಿರುವ ಕುರಿತು ಮೃತರ ಕುಟುಂಬಸ್ಥರು ತಿಳಿಸಿದ್ದರು. ಹಾಗಾಗಿ, ಅದನ್ನು ಅನುಮೋದಿಸಿ, ಸರಿಪಡಿಸಿ ಹೆಸರುಗಳನ್ನು ಪ್ರಯಾಗ್‌ರಾಜ್ ಜಿಲ್ಲಾಧಿಕಾರಿಗಳಿಗೆ ವಾಟ್ಸ್​ಆ್ಯಪ್​ ಮತ್ತು ಮೇಲ್ ಮೂಲಕ ಕಳಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಮರಣೋತ್ತರ ವರದಿ ಮತ್ತು ಮರಣ ಪ್ರಮಾಣಪತ್ರವನ್ನು ಕಳುಹಿಸಿಕೊಡುವ ಬಗ್ಗೆ ಪ್ರಯಾಗ್​ರಾಜ್ ಜಿಲ್ಲಾಡಳಿತ ನಮಗೆ ಭರವಸೆ ನೀಡಿದೆ” ಎಂದು ಮೊಹಮ್ಮದ್ ರೋಷನ್ ಇದೇ ವೇಳೆ ಸ್ಪಷ್ಟಪಡಿಸಿದರು.

ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಎರಡು ಬಸ್​ಗಳಲ್ಲಿ ಬೆಳಗಾವಿಯ 60 ಮಂದಿ ಜನವರಿ 26ರಂದು ಪ್ರಯಾಗ್​ರಾಜ್‌ಗೆ ತೆರಳಿದ್ದರು. ಇವರಲ್ಲಿ ನಾಲ್ವರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಉಳಿದ 56 ಮಂದಿ ಸುರಕ್ಷಿತವಾಗಿರುವುದಾಗಿ ಅಂದೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ದಿಗಂತ್ ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಭರತ್ ಶೆಟ್ಟಿ, ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

“ಟ್ರಾವೆಲ್ಸ್‌ನವರು​ ಊಟ, ಉಪಹಾರ ಸೇರಿ ಎಲ್ಲ ವ್ಯವಸ್ಥೆಯನ್ನು ಒಳ್ಳೆಯ ರೀತಿ ಮಾಡಿದ್ದಾರೆ‌. ನಮ್ಮ ವಾಹನ ಪ್ರಯಾಗ್​ರಾಜ್‌ನಿಂದ 30-40 ಕಿಮೀ ದೂರದಲ್ಲಿತ್ತು. ಹಾಗಾಗಿ, ಗುಂಪುಗಳನ್ನಾಗಿ ವಿಂಗಡಿಸಿ 2 ಗಂಟೆಯೊಳಗೆ ನದಿಯಲ್ಲಿ ಸ್ನಾನ ಮಾಡಿ ಬರುವಂತೆ ತಿಳಿಸಿದ್ದರು‌‌. ಅದೇ ರೀತಿ ಬ್ರಾಹ್ಮಿ ಮುಹೂರ್ತದಲ್ಲಿ ಸ್ನಾನಕ್ಕೆಂದು 9 ಜನರ ಗುಂಪು ತೆರಳಿತ್ತು. ಆ ವೇಳೆ ಏಕಾಏಕಿ ಕಾಲ್ತುಳಿತ ಉಂಟಾಗಿ ನಾಲ್ಕು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಾಯಿರಥ ಟ್ರಾವೆಲ್ಸ್‌​ನವರದ್ದು ಯಾವುದೇ ತಪ್ಪಿಲ್ಲ, ಸುರಕ್ಷಿತವಾಗಿ ಹೋಗಿ ವಾಪಸ್​ ಬಂದು ಬಸ್‌ ಹತ್ತುವಂತೆ ಅವರು ಮೊದಲೇ ನಮಗೆ ತಿಳಿಸಿದ್ದರು” ಎಂದು 56 ಜನರಿದ್ದ ತಂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿತ್ತು.

ಆರಂಭದಲ್ಲಿ ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ(50) ಮತ್ತು ಪುತ್ರಿ ಮೇಘಾ ಹತ್ತರವಾಟ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದಾದ ಬಳಿಕ ಪತ್ನಿ ಜತೆಗೆ ಪ್ರಯಾಗ್​ರಾಜ್‌ಗೆ ತೆರಳಿದ್ದ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಮೃತಪಟ್ಟಿರುವ ಮಾಹಿತಿ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...

ಬೀದರ್‌ | ಪಶು ವೈದ್ಯಕೀಯ ವಿವಿ ಪ್ರಭಾರ ಕುಲಪತಿಯಾಗಿ ಎ.ಟಿ.ರಾಮಚಂದ್ರ ನಾಯ್ಕ ಅಧಿಕಾರ ಸ್ವೀಕಾರ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ...