ಬೆಳಗಾವಿ | ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದಿಂದ ಲಕ್ಷ್ಮಣ ಜಡಗನ್ನವರ ಸ್ಪರ್ಧೆ

Date:

ಕರ್ನಾಟಕದಲ್ಲಿ 19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಯುಸಿಐ(ಕಮ್ಯುನಿಸ್ಟ್) ಸ್ಪರ್ಧೆ ಮಾಡುತ್ತಿದ್ದು, ಬೆಳಗಾವಿಯಿಂದ ಲಕ್ಷ್ಮಣ ಜಡಗನ್ನವರ ಕಣಕ್ಕಿಳಿದಿದ್ದಾರೆ ಎಂದು ಎಸ್‌ಯುಸಿಐ(ಕಮ್ಯುನಿಸ್ಟ್) ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ತಿಳಿಸಿದ್ದಾರೆ.

- Advertisement -

ಬೆಳಗಾವಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, “ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷವು 2024ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ. ದೇಶದ 19 ರಾಜ್ಯ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈ ಚುನಾವಣೆ ಬಂಡವಾಳಶಾಹಿ ಮತ್ತು ಕಾರ್ಮಿಕರ ನಡುವಿನ ಶೋಷಕರು ಮತ್ತು ಶೋಷಿತರ ನಡುವಿನ ಸಮರವಾಗಿದೆ. ಭಾರತದ ಶೋಷಿತ ದುಡಿಯುವ ವರ್ಗದ, ಬಡ ರೈತರ ಪರ್ಯಾಯವಾಗಿ ದೇಶದ ಎಡಪಕ್ಷಗಳು ಒಂದು ಒಕ್ಕೂಟದ ಮೂಲಕ ಜನ ಹೋರಾಟಗಳನ್ನು ಕಟ್ಟಬೇಕಾಗಿತ್ತು. ಚುನಾವಣೆಗಳು ಪರಿಹಾರವಲ್ಲ, ಸಮಾಜವಾದವೇ ನೈಜ ಪರಿಹಾರವೆಂಬ ಪ್ರಚಾರವನ್ನು ಕೈಗೆತ್ತಿಕೊಳ್ಳಬೇಕಿತ್ತು. ಆದರೆ ದುರಂತವೆಂದರೆ ಸಿಪಿಐ, ಸಿಪಿಐಎಂ ನಂತಹ ಎಡವಾದಿ ಪಕ್ಷಗಳು ಕೆಲವು ಎಂಪಿ ಸೀಟುಗಳ ಆಸೆಗೆ ಇಂಡಿಯಾ ಮೈತ್ರಿಕೂಟವನ್ನು ಸೇರಿವೆ. ಇಂತಹ ಪರಿಸ್ಥಿತಿಯಲ್ಲಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ಶೋಷಿತ ಜನರ ನೈಜ ಹೋರಾಟದ ಪರ್ಯಾಯವಾಗಿ ತನ್ನ ಶಕ್ತಿಮೀರಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ” ಎಂದು ಹೇಳಿದರು.

“ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ ಜಡಗನ್ನವರ 2000ನೇ ಇಸವಿಯಲ್ಲಿ ನಮ್ಮ ಪಕ್ಷದ ಸಂಸ್ಥಾಪಕ ಶಿವದಾಸ್ ಘೋಷ್ ಅವರ ಚಿಂತನೆಗಳಿಗೆ ಆಕರ್ಷಿತರಾಗಿ ಧಾರವಾಡದಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಪ್ರಾರಂಭದಲ್ಲಿ ಯುವಜನ ಸಂಘಟನೆ ಎಐಡಿವೈಓ ಜಿಲ್ಲಾ ನಾಯಕರಾಗಿ, ರಾಜ್ಯ ನಾಯಕರಾಗಿ ಧಾರವಾಡ, ಬೆಳಗಾವಿ ಸೇರಿದಂತೆ ಈ ವಿಭಾಗದಲ್ಲಿ ಯುವಜನರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸತತವಾಗಿ ಹೋರಾಟಗಳಿಗೆ ನೇತೃತ್ವ ವಹಿಸಿದ್ದಾರೆ” ಎಂದು ಹೇಳಿದರು.

“ಪ್ರಾರಂಭದಿಂದಲೂ ಪಕ್ಷದ ಪೂರ್ಣಾವಧಿ ಕಾರ್ಯಕರ್ತರಾಗಿ ಯುವಜನರ, ರೈತ-ಕಾರ್ಮಿಕರ ಚಳವಳಿಗಳಿಗೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಎಸ್‌ಯುಸಿಐ(ಸಿ) ಪಕ್ಷದ ಧಾರವಾಡ ಜಿಲ್ಲಾ ಕಾರ್ಯದರ್ಶಿಯಾಗಿ ಜಿಲ್ಲೆಯ ಜನಹೋರಾಟಗಳಿಗೆ ನೇತೃತ್ವ ವಹಿಸುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ʼದೇಶ ಉಳಿಸಿ ಸಂಕಲ್ಪ ಯಾತ್ರೆʼ ಸಮಾವೇಶ

“ಬೆಳಗಾವಿ ಜಿಲ್ಲೆಯ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯ ಆಶಾ ಕಾರ್ಯಕರ್ತೆಯರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟಗಳನ್ನು ಬೆಳೆಸಿದ್ದಾರೆ. ಕೊಳಗೇರಿಗಳಲ್ಲಿ ವಾಸಿಸುವ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಹಲವಾರು ವರ್ಷಗಳು ನಡೆದ ಹೋರಾಟಗಳಿಗೆ ನೇತೃತ್ವ ವಹಿಸಿದ್ದರು. ಇಂತಹ ಜನಪರ ಹೋರಾಟಗಾರನನ್ನು ಜಿಲ್ಲೆಯ ಪ್ರಜ್ಞಾವಂತ ಮತದಾರರು ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ಅಭ್ಯರ್ಥಿ ಲಕ್ಷ್ಮಣ ಜಡಗನ್ನವರ, ಮುಖಂಡರುಗಳಾದ ಲಕ್ಕಪ್ಪ ಬಿಜ್ಜನ್ನವರ ಹಾಗೂ ರಾಜು ಗಾಣಗಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...