ಬೆಳಗಾವಿ | ಪ್ರವಾಹ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ರಾಜು ಕಾಗೆ ಸೂಚನೆ

Date:

Advertisements

ಮಳೆಗಾಲ ಪ್ರಾರಂಭವಾಗಿದ್ದು, ಪ್ರವಾಹ ಉಂಟಾದರೆ ಕೃಷಿ ಚಟುವಟಿಕೆ ಹಾಗೂ ಜನ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಮುಂಜಾಗೃತಾ ಕ್ರಮವಹಿಸಿ. ಕಾಳಜಿ ಕೇಂದ್ರಗಳನ್ನು ಗುರುತಿಸಿ ಎಲ್ಲ ಸಿದ್ದತೆ ಮಾಡಿಕೊಳ್ಳಬೇಕೆಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ಬೆಳಗಾವಿ ಜಿಲ್ಲೆ ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ತಾಲೂಕು ಮಟ್ಟದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಪ್ರವಾಹ ನಿಯಂತ್ರಣಕ್ಕೆ ಸಿದ್ದತೆ‌ ಮಾಡಿಕೊಳ್ಳಬೇಕು. ದೋಣಿಗಳನ್ನು ಸುಸ್ಥಿತಿಯಲ್ಲಿಡಬೇಕು ಹಾಗೂ ಕಾಳಜಿ ಕೇಂದ್ರ ಗುರುತಿಸಿ ಅಗತ್ಯ ಸೌಲಭ್ಯ ಮಾಡಿಕೊಳ್ಳಬೇಕು. ಇದಕ್ಕಾಗಿ ಒಬ್ಬ ಅಧಿಕಾರಿಯನ್ನೂ ನೇಮಿಸಬೇಕು” ಎಂದು ಸೂಚಿಸಿದರು.

Advertisements

“ಮಳೆಗಾಲ ಪ್ರಾರಂಭವಾಗಿರುವದರಿಂದ ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೀಜ ರಸಗೊಬ್ಬರ ದಾಸ್ತಾನು ಇಟ್ಟು ರೈತರಿಗೆ ಸಕಾಲದಲ್ಲಿ ಪೂರೈಕೆ ಆಗುವಂತೆ ನಿಗಾವಹಿಸಬೇಕು” ಎಂದು ಕೃಷಿ ಇಲಾಖೆ‌ ಅಧಿಕಾರಿಗಳಿಗೆ ತಿಳಿಸಿದ್ದಾರೆ.

“ಬಸವೇಶ್ವರ ಏತ ನೀರಾವರಿ ಯೋಜನೆ ಪ್ರಾರಂಭ ಮಾಡಲಿದ್ದು. ಅದಕ್ಕೆ ಬೇಕಾದ ಅಗತ್ಯ
ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ” ಎಂದು ಸಚಿವರು ನೀರಾವರಿ ಇಲಾಖೆಯ ಅಧಿಕಾರಿ ಎಇಇ ಕೆ ರವಿ ಹಾಗೂ ಹೆಸ್ಕಾಂ ಅಧಿಕಾರಿ ಎಇಇ ದುರ್ಯೋಧನ ಮಾಳಿ ಅವರಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ಜಾಲತಾಣ ಬಳಕೆಯಿಂದ ಮಾಧ್ಯಮಗಳ ಪ್ರಭಾವ ತಗ್ಗುತ್ತಿದೆ: ಪ್ರಾ. ರಮೇಶ ಅರೋಲಿ

ಕಾಗವಾಡ ಪಟ್ಟಣದಲ್ಲಿ ನಡೆದ ಸಭೆಯಲ್ಲಿ ತಹಶೀಲ್ದಾರ್ ರಾಜೇಶ ಬುರ್ಲಿ, ಸಂಜೀವಕುಮಾರ ಸದಲಗಿ, ಡಿ‌ ಜೆ ಕಾಂಬಳೆ, ಮಾಹಾಂತೇಶ ಕವಲಾಪೂರ, ಜಯಾನಂದ‌ ಹಿರೇಮಠ, ಮಾಹಾಂತೇಶ ಭಂಡಗರ, ಪ್ರಶಾಂತ ಗಾಣಿಗೇರ, ನಿಂಗನಗೌಡ ಬಿರಾದಾರ, ಎ ಡಿ ಅನ್ಸಾರಿ, ಕೆ ರವಿ, ಇ.ಒ ಈರಣ್ಣ ವಾಲಿ, ಎಂ‌ ಆರ್ ಮುಂಜೆ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X