ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದ ಬಳಿ ನಡೆದಿದೆ.
ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ ದ್ಯಾಮಪ್ಪ ಕಾಟಾಬಳಿ(25), ಹುಕ್ಕೇರಿ ತಾಲೂಕಿನ ಚಿಕಲದಿನ್ನಿ ಗ್ರಾಮದ ನಿವಾಸಿ ನಾಗರಾಜ ದ್ಯಾಮಪ್ಪ ಕಟಾಬಳಿ(21) ಬಂಧಿತರು.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಇಬ್ಬರು ಪಿಯು ಟಾಪರ್‌ಗಳಿಗೆ; ತಲಾ ₹5 ಲಕ್ಷ ನಗದು, ಸ್ಕೂಟಿ ಕೊಡುಗೆ ನೀಡಿದ ಸಚಿವ ಜಮೀರ್
ಇತ್ತೀಚೆಗೆ ಹಾಲಪ್ಪ ಹಾಗೂ ದ್ಯಾಮಪ್ಪ ಶಹಬಂದರ ಕ್ರಾಸ್‌ನ ವಾಲ್ಮೀಕಿ ಸರ್ಕಲ್ ಬಳಿ ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿದ್ದರು. ಅಲ್ಲದೇ ಜನರನ್ನು ನಿಂದಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದರು. ವಿಷಯ ತಿಳಿದ ಯಮಕನಮರಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.