ಬೆಳಗಾವಿ | ಕುಡಿಯುವ ನೀರಿನ ಸಮಸ್ಯೆ ಉಲ್ಬಣ; ಕೊಳವೆಬಾವಿ ಕೊರೆಸಲು ಶಾಸಕ ಪಾಟೀಲ್‌ ನಿರ್ಧಾರ

Date:

  • ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನೀರು ಪೂರೈಕೆಗೆ ಮುಂದಾದ ಶಾಸಕ
  • ‘ಸ್ಮಾರ್ಟ್ ಸಿಟಿ’ ಟ್ಯಾಗ್ ಹೊಂದಿದ್ದರೂ, ಬೆಳಗಾವಿಯಲ್ಲಿ ಉಂಟಾದ ನೀರಿನ ಕೊರತೆ

ಬೇಸಿಗೆ ಆರಂಭದಲ್ಲಿ ನೀರು ಸರಬರಾಜಿನಲ್ಲಿ ಉಂಟಾಗಿರುವ ಅಡೆತಡೆಗಳನ್ನು ನಿವಾರಿಸಲು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ವಿಭಿನ್ನ ಪರಿಹಾರ ಕೈಗೊಂಡಿದ್ದು, ತಮ್ಮ ಕ್ಷೇತ್ರದಲ್ಲಿ 73 ಕೊಳವೆಬಾವಿಗಳನ್ನು ಕೊರೆಸಲು ಮುಂದಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ತೀವ್ರವಾಗಿ ಹದಗೆಟ್ಟಿದೆ. ಅನೇಕ ಪ್ರದೇಶಗಳಲ್ಲಿ ಹದಿನೈದು ದಿನಗಳಿಗೊಮ್ಮೆ ನಲ್ಲಿ ನೀರು ಬರುತ್ತಿದೆ. ಇದರಿಂದ ಸ್ಥಳೀಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನೀರು ಪೂರೈಕೆ ವ್ಯವಸ್ಥೆಗಾಗಿ ಶಾಸಕ ಪಾಟೀಲ್ ಕೊಳವೆಬಾವಿಗಳನ್ನು ಕೊರೆಸಲು ಮುಂದಾಗಿದ್ದಾರೆ.

ನಗರದ ಹೃದಯಭಾಗದಲ್ಲಿರುವ ಬಹುತೇಕ ಐಷಾರಾಮಿ ಪ್ರದೇಶಗಳಲ್ಲಿಯೂ ನೀರಿನ ಸಮಸ್ಯೆ ತೀವ್ರವಾಗಿದ್ದು, 5 ರಿಂದ 7 ದಿನಗಳಿಗೊಮ್ಮೆ ನೀರಿನ ಪೂರೈಕೆಯಾಗುತ್ತಿದೆ.

“ನೀರು ಪೂರೈಕೆ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿರುವುದು ಎಲ್ಲರಿಗೂ ತಿಳಿದಿದೆ. ಎರಡು ದಶಕಗಳ ಹಿಂದೆ, ರೆಕಾಸ್ಕೋಪ್ ಅಣೆಕಟ್ಟಿನಿಂದ ನಗರಕ್ಕೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಈಗ ಹಿಡಕಲ್ ಅಣೆಕಟ್ಟನ್ನು ಸೇರಿಸಲಾಗಿದೆ. 2032ರವರೆಗೆ ನಗರದ ನಿವಾಸಿಗಳಿಗೆ ವಾರದ 24 ಗಂಟೆಯೂ ನೀರು ಪೂರೈಕೆ ಮಾಡಲು ಹಿಡಕಲ್ ಅಣೆಕಟ್ಟು ಯೋಜನೆ ಜಾರಿಗೆ ತರಲಾಗಿದೆ” ಎಂದು ಶಾಸಕ ಪಾಟೀಲ್‌ ತಿಳಿಸಿದ್ದಾರೆ.

“ನೀರಿನ ಸಮಸ್ಯೆ ಮಾತ್ರವಲ್ಲ, ಕಳೆದ ಎರಡು ದಶಕಗಳಿಂದ ಚಾನಲ್‌ ನೀರು ಪೂರೈಕೆ ಕೂಡ ಸುಧಾರಿಸಿಲ್ಲ. ಹೀಗಾಗಿ, ‘ಸ್ಮಾರ್ಟ್ ಸಿಟಿ’ ಟ್ಯಾಗ್ ಹೊಂದಿದ್ದರೂ, ಬೆಳಗಾವಿಯಲ್ಲಿ ಭಾರೀ ನೀರಿನ ಕೊರತೆ ಉಂಟಾಗಿದೆ. ಎಲ್‌ ಆ್ಯಂಡ್‌ ಟಿ ಸಂಸ್ಥೆ ಸಮರ್ಪಕವಾಗಿ ನೀರು ಪೂರೈಕೆ ಮಾಡದ ಕಾರಣ ಸಮಸ್ಯೆ ಉದ್ಭವಿಸಿದೆ” ಎಂದು ಶಾಸಕ ಅಭಯ್ ಪಾಟೀಲ್ ತಿಳಿಸಿದ್ದಾರೆ.

“ನಗರಕ್ಕೆ ಸಮರ್ಪಕ ನೀರು ಪೂರೈಕೆ ಮಾಡುವುದು ಎಲ್‌ ಆ್ಯಂಡ್‌ ಟಿ ಜವಾಬ್ದಾರಿಯಾಗಿದೆ. ನೀರು ಪೂರೈಕೆ ಚಾನಲ್‌ಗೆ ಯಾವುದೇ ಸಮಸ್ಯೆ ಇದ್ದರೆ, ಕಂಪನಿಯು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಬೇಕು. ಆದರೆ, ಅದು ಹಾಗೆ ಮಾಡುತ್ತಿಲ್ಲ. ಇದಲ್ಲದೆ, ನಿರ್ವಹಣೆಗೆ ಸಂಬಂಧಿಸಿದಂತೆ ಸಂಸ್ಥೆಗೆ ಅನೇಕ ಸಮಸ್ಯೆಗಳಿವೆ. ಹಾಗಾಗಿ ನಗರದಲ್ಲಿ ನೀರಿನ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ” ಎಂದು ಹೇಳಿದ್ದಾರೆ.

“ನಗರದಲ್ಲಿ ಹೆಚ್ಚುತ್ತಿರುವ ನೀರು ಸರಬರಾಜಿನ ಅಡೆತಡೆಗಳ ಬಗ್ಗೆ ಚರ್ಚಿಸಲು ಎಲ್‌ ಆ್ಯಂಡ್‌ ಟಿ, ನಗರಾಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮ (ಕೆಯುಐಡಿಎಫ್ ಸಿ) ಅಧಿಕಾರಿಗಳೊಂದಿಗೆ ಶುಕ್ರವಾರ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ” ಎಂದು ಶಾಸಕ ಪಾಟೀಲ್ ತಿಳಿಸಿದ್ದಾರೆ.

“ಸಭೆಯಲ್ಲಿ ಈ ವಿಷಯಗಳ ಬಗ್ಗೆ ವಿವರವಾಗಿ ಚರ್ಚಿಸಲಾಗುವುದು. ನಗರಾಭಿವೃದ್ಧಿ ಇಲಾಖೆಯು ಎಲ್‌ ಆ್ಯಂಡ್‌ ಟಿ ಜೊತೆಗಿನ ಒಪ್ಪಂದವನ್ನು ರದ್ದುಗೊಳಿಸಿ, ಕಂಪನಿಗೆ ದಂಡ ವಿಧಿಸಬೇಕು. ನೀರು ಪೂರೈಕೆ ಸೇವೆಗಳನ್ನು ಆದಷ್ಟು ಬೇಗ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಗೆ ಹಸ್ತಾಂತರಿಸಬೇಕು” ಎಂದು ಶಾಸಕ ಪಾಟೀಲ್ ಒತ್ತಾಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ...

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ಧರಣಿ

ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ...

ಬೆಳಗಾವಿ | ಅಧಿವೇಶನದಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಡಿ.4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವವರಿಗೆ ವಸತಿ,...

ಚಿಕ್ಕಮಗಳೂರು | ಠಾಣೆಯಲ್ಲಿ ಕೂಡಿಹಾಕಿ ಯುವ ವಕೀಲನಿಗೆ ಥಳಿತ; ಪಿಎಸ್‌ಐ ಸೇರಿ 6 ಮಂದಿ ಅಮಾನತು

ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನೋರ್ವನನ್ನು ಠಾಣೆಯಲ್ಲಿ ಕೂಡಿಹಾಕಿ...