ಬೆಳಗಾವಿ | ಒಂಬತ್ತು ತಿಂಗಳ ಗರ್ಭಿಣಿ ಕೊಲೆ

Date:

ಒಂಬತ್ತು ತಿಂಗಳ ಗರ್ಭಿಣಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.

- Advertisement -

ಚಿಕ್ಕೂಡ ನಿವಾಸಿ ಸುವರ್ಣಾ ಮಾಂತಯ್ಯ ಮಠಪತಿ(36) ಕೊಲೆಯಾದ ಗರ್ಭಿಣಿ. ಇವರು ಶುಕ್ರವಾರ ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು, ಮೇವು ತರಲೆಂದು ಹೊಲಕ್ಕೆ ಹೋಗಿದ್ದರು. ಮರಳಿ ಬರುವಾಗ ಮಾರ್ಗಮಧ್ಯೆ ದುಷ್ಕರ್ಮಿಗಳು ಇವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಹೊಟ್ಟೆ, ಮುಖ ಹಾಗೂ ತಲೆ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ರಕ್ತಸಿಕ್ತವಾಗಿ ಬಿದ್ದದ್ದ ಮಹಿಳೆಯನ್ನು ಕಂಡ ಜನರು, ಪತಿ ಮಾಂತಯ್ಯ ಅವರಿಗೆ ತಿಳಿಸಿದ್ದಾರೆ. ವಾಹನದಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಪ್ರಾಣ ಬಿಟ್ಟಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಸುದ್ದಿ ಓದಿದ್ದೀರಾ? ನೆಲಮಂಗಲ | ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ, 6 ಮಂದಿ ದಾರುಣ ಸಾವು

“ಮಾಂತಯ್ಯ ಮತ್ತು ಸುವರ್ಣ ದಂಪತಿಗೆ ಈಗಾಗಲೇ ನಾಲ್ವರು ಹೆಣ್ಣುಮಕ್ಕಳಿದ್ದು, 5ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ವೈದ್ಯರು ಜನವರಿ 30ಕ್ಕೆ ಹೆರಿಗೆ ದಿನಾಂಕ ನೀಡಿದ್ದರು. ಮಹಿಳೆ ಕೊಲೆ ಬಗ್ಗೆ ಯಾರ ಮೇಲೂ ಅನುಮಾನವಿಲ್ಲ ಎಂದು ಪತಿ ಹಾಗೂ ಸುವರ್ಣಾ ಅವರ ತಂದೆ-ತಾಯಿ ತಿಳಿಸಿದ್ದಾರೆ. ಅವರು ಏನಾದರೂ ದೂರು ನೀಡಿದರೆ ಕ್ರಮ ವಹಿಸಲಾಗುವುದು” ಎಂದು ಅಥಣಿ ಪೊಲೀಸರು ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...

ಹಾಸನ | ಮೂಢನಂಬಿಕೆ, ಜಾತಿ ತಾರತಮ್ಯ ಮತ್ತು ಅಸಮಾನತೆ ವಿರುದ್ಧ ವೈಚಾರಿಕತೆ ಅಗತ್ಯ; ಸಿಪಿಐಎಂ ಧರ್ಮೇಶ್ 

ಇಂದಿನ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತಿ ತಾರತಮ್ಯ, ಅಸ್ಪೃಶ್ಯತೆ, ಕೋಮುವಾದ ಸೇರಿದಂತೆ...

ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು

ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ...