ಬೆಳಗಾವಿ | ಕೋವಿಡ್-19 ಹಠಾತ್ ಏರಿಕೆ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

Date:

  • ಬೆಳಗಾವಿ ಜಿಲ್ಲೆಯ ಭಾನುವಾರ 14 ಕೋವಿಡ್-19 ಪ್ರಕರಣ ಪತ್ತೆ
  • ಕೋವಿಡ್‌ ಹೆಚ್ಚಳದಲ್ಲಿ ಬೆಳಗಾವಿ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ

ಕಳೆದ ಒಂದು ತಿಂಗಳಿನಿಂದ ಒಂದೇ ಒಂದು ಪ್ರಕರಣ ವರದಿಯಾಗದ ಕಾರಣ ಮತ್ತು ಯಾವುದೇ ಸಕ್ರಿಯ ಪ್ರಕರಣಗಳಿಲ್ಲದ ಕಾರಣ ಬೆಳಗಾವಿ ಜಿಲ್ಲೆಯನ್ನು ಕೋವಿಡ್ -19 ನಿಂದ ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ ಎಂದು ಫೆಬ್ರವರಿಯಲ್ಲಿ ಆರೋಗ್ಯ ಇಲಾಖೆ ಘೋಷಿಸಿತ್ತು. ಆದರೆ, ಶನಿವಾರ ಕೋವಿಡ್‌ನ ಹಠಾತ್ ಹೆಚ್ಚಳದಿಂದ ಜಿಲ್ಲೆಯ ಜನರಲ್ಲಿ ಭೀತಿ ಉಂಟಾಗಿದೆ.

ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ 19 ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಗಡಿ ತಾಲೂಕುಗಳಾದ ನಿಪ್ಪಾಣಿ ಮತ್ತು ಚಿಕ್ಕೋಡಿಯಲ್ಲಿ 15, ಬೆಳಗಾವಿ ನಗರದಲ್ಲಿ 2, ರಾಯಬಾಗ ಮತ್ತು ಸವದತ್ತಿ ತಾಲೂಕುಗಳಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ. ಬೆಂಗಳೂರು ನಗರ ಮತ್ತು ಶಿವಮೊಗ್ಗದ ನಂತರ ಬೆಳಗಾವಿ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ.

ಆರೋಗ್ಯ ಇಲಾಖೆ ಪ್ರಕಾರ, ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲೂಕಿನ ಅಕ್ಕೋಲ್, ಕೊಗನೊಳ್ಳಿ, ಸೌಂದಲಗಾ, ಮಂಗೂರು, ಜೈನಾಪುರ ಮತ್ತು ಇಂಗಳಿ ಗ್ರಾಮಗಳಲ್ಲಿ 15 ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಪ್ರಕರಣಗಳ ಹಠಾತ್ ಹೆಚ್ಚಳದಿಂದ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ, ರೋಗಿಗಳನ್ನು ಮನೆಯಲ್ಲಿ ಪ್ರತ್ಯೇಕಿಸುವ ಮೂಲಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

“ಶನಿವಾರ ವರದಿಯಾದ ಒಟ್ಟು 19 ಪ್ರಕರಣಗಳಲ್ಲಿ 16 ಪ್ರಕರಣಗಳು ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿವೆ” ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮಹೇಶ್ ಕೋಣಿ ತಿಳಿಸಿದ್ದಾರೆ.

“ಕಟ್ಟುನಿಟ್ಟಾದ ಹೋಮ್ ಐಸೋಲೇಷನ್ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆಹಚ್ಚುವ ಮೂಲಕ ನಾವು ಪ್ರತಿ ಪ್ರಕರಣವನ್ನು ಮೇಲ್ವಿಚಾರಣೆ ಮಾಡುತ್ತೇವೆ. ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಸಂಚರಿಸುವ ಜನರ ಮೇಲೆ ಕಣ್ಣಿಡಲು ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಹೇಳಿದರು.

“ಕೋವಿಡ್ -19 ಪ್ರಕರಣಗಳ ಹಠಾತ್ ಏರಿಕೆಯ ನಂತರ, ನಾವು ಭಾನುವಾರದಿಂದ ಜಿಲ್ಲೆಯಾದ್ಯಂತ ಪರೀಕ್ಷೆಗಳನ್ನು ದ್ವಿಗುಣಗೊಳಿಸಿದ್ದೇವೆ. ಮುಂಬರುವ ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಇತರ ಅಗತ್ಯ ವಿಷಯಗಳ ಜೊತೆಗೆ ಹೆಚ್ಚಿನ ಲಸಿಕೆಗಳು ಮತ್ತು ಮಾಸ್ಕ್‌ ಧರಿಸುವಂತೆ ಈಗಾಗಲೇ ತಿಳಿಸಿದ್ದೇನೆ” ಎಂದು ಡಾ. ಕೋನಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ದೇಶದಲ್ಲಿ ಒಂದೇ ದಿನ 4,435 ಮಂದಿಗೆ ಕೋವಿಡ್ ದೃಢ

“ಈವರೆಗೆ, ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಆತಂಕ ಪಡುವ ಅಗತ್ಯವಿಲ್ಲ. ಆದರೆ, ಆಗಾಗ್ಗೆ ಕೈಗಳನ್ನು ತೊಳೆಯುವ ಮೂಲಕ, ಜನದಟ್ಟಣೆಯ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವ ಮೂಲಕ ಕೋವಿಡ್‌ನ ಸೂಕ್ತ ಮುಂಜಾಗೃತ ಕ್ರಮ ಅನುಸರಿಸಬೇಕು” ಎಂದು ವೈದ್ಯರು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ 14 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ವರದಿಯಾದ ಒಟ್ಟು ಪ್ರಕರಣಗಳಲ್ಲಿ 10 ಪ್ರಕರಣಗಳು ಸವದತ್ತಿ ತಾಲೂಕಿನಿಂದ, ಇಬ್ಬರು ಬೆಳಗಾವಿ ನಗರದಿಂದ ಮತ್ತು ಉಳಿದ ಇಬ್ಬರು ಚಿಕ್ಕೋಡಿ ಮತ್ತು ಖಾನಾಪುರದಿಂದ ಬಂದವರು. ಇದರೊಂದಿಗೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 36ಕ್ಕೆ ಏರಿದೆ ಎಂದು ವರದಿಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಈಗಲಾದರೂ ಚರ್ಚೆಗೆ ಬರುತ್ತದೆಯೇ ಪ್ರಾದೇಶಿಕ ಅಸಮಾನತೆ ಕೂಗು

ಕರ್ನಾಟಕ ಏಕೀಕರಣವಾಗಿ ಅರ್ಧ ಶತಮಾನ ಕಳೆದರೂ ಇಡೀ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಯ...

ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ....

ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30...