ರಸ್ತೆಬಳಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಸಾರಿಗೆ ಬಸ್ ಹರಿದು ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ.
ಸುನಿಲ್(10) ಮೃತ ಬಾಲಕ. ಆಗತಾನೇ ಟ್ಯೂಷನ್ ಕ್ಲಾಸ್ ಮುಗಿಸಿಕೊಂಡು ಹೊರಬಂದ ವಿದ್ಯಾರ್ಥಿಗಳು, ರಸ್ತೆ ದಾಟಿ ರಸ್ತೆಬದಿ ನಿಂತಿದ್ದರು. ಈ ವೇಳೆ ಸರ್ಕಾರಿ ಬಸ್ಸೊಂದು ಮಕ್ಕಳ ಮೇಲೆಯೇ ಹರಿದಿದೆ. ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ವಾಯವ್ಯ ಕರ್ನಾಟಕ ಬದಲು ಕಿತ್ತೂರು ಕರ್ನಾಟಕ ಸಾರಿಗೆ ಎಂದು ನಾಮಕರಣಕ್ಕೆ ಚಿಂತನೆ: ಸತೀಶ್ ಜಾರಕಿಹೊಳಿ
ರಸ್ತೆಬದಿ ಮಕ್ಕಳು ನಿಂತಿರುವುದನ್ನು ಕಂಡರೂ ಕೂಡಾ ಚಾಲಕ ನಿರ್ಲಕ್ಷ್ಯ ವಹಿಸಿದ್ದು, ಬಸ್ ಚಲಾಯಿಸಿದ್ದಾನೆ ಎನ್ನಲಾಗಿದೆ. ಬಸ್ ಚಾಲಕನ ಬೇಜವಾಬ್ದಾರಿ ಚಾಲನೆಗೆ ಬಾಲಕ ಬಲಿಯಾಗಿದ್ದಾನೆ. ಚಾಲಕನನ್ನು ಹಿಡಿದು ಶಿಕ್ಷಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.