ಬೆಳಗಾವಿ | ಬಿಜೆಪಿ ಕಾರ್ಯಕರ್ತರ ಗದ್ದಲ ತಡೆಯಲು ವಿಫಲ ಆರೋಪ; ಇಬ್ಬರು ಪೊಲೀಸರ ಅಮಾನತು

Date:

ಬೆಳಗಾವಿ ನಗರದಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರ ಗದ್ದಲ ತಡೆಯಲು ವಿಫಲರಾದ ಕಾರಣ ನೀಡಿ, ನಗರದ ಖಡೇಬಜಾರ್ ಠಾಣೆಯ ಕಾನ್‌ಸ್ಟೆಬಲ್ ಬಿ ಎ ನೌಕುಡಿ ಮತ್ತು ಕ್ಯಾಂಪ್ ಠಾಣೆಯ ಕಾನ್‌ಸ್ಟೆಬಲ್ ಮಲ್ಲಪ್ಪ ಹಡಗಿನಾಳ ಅವರನ್ನು ಅಮಾನತುಗೊಳಿಸಿ ಉತ್ತರ ವಲಯ ಐಜಿಪಿ ಚೇತನಸಿಂಗ್‌ ರಾಥೋಡ್‌ ಆದೇಶ ಹೊರಡಿಸಿದ್ದಾರೆ.

- Advertisement -

“ಇಡೀ ಸಮಾವೇಶದ ಆಗು–ಹೋಗುಗಳ ಮೇಲೆ ನಿಗಾ ಇಡಲು ಇಬ್ಬರಿಗೂ ಜವಾಬ್ದಾರಿ ವಹಿಸಲಾಗಿತ್ತು. ಕಪ್ಪು ಬಾವುಟ ಪತ್ತೆ ಮಾಡುವಲ್ಲಿ, ಗಲಾಟೆಯ ವಿಷಯ ಮೇಲಧಿಕಾರಿಗಳಿಗೆ ತಿಳಿಸುವಲ್ಲಿ ಈ ಇಬ್ಬರು ಸಿಬ್ಬಂದಿ ಲೋಪ ಎಸಗಿದ್ದಾರೆ. ಜವಾಬ್ದಾರಿ ಸರಿಯಾಗಿ ನಿರ್ವಹಿಸದ ಕಾರಣ ಅಮಾನತು ಮಾಡಲಾಗಿದೆ” ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಮಾವೇಶದ ಸ್ಥಳಕ್ಕೆ ನುಗ್ಗಿದ ಬಿಜೆಪಿಯ ಆರು ಕಾರ್ಯಕರ್ತೆಯರು ಕಪ್ಪು ಬಾವುಟ ಪ್ರದರ್ಶಿಸಿದ್ದರು. ಸಿಎಂ ವಿರುದ್ಧ ಘೋಷಣೆ ಕೂಗಿದ್ದರು. ಈ ಎಲ್ಲದರ ಮಧ್ಯೆ ಭದ್ರತಾ ವೈಫಲ್ಯ ಬಗ್ಗೆ ಸಿಟ್ಟಿಗೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಎಸ್‌ಪಿ ನಾರಾಯಣ ಭರಮಣಿ ಅವರ ಮೇಲೆ ಕೈ ಎತ್ತಲು ಮುಂದಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ : ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದಾಗ ಒಬ್ಬ ಪೊಲೀಸ್‌ ಅಲ್ಲಿರಲಿಲ್ಲ

“ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳ ಲೋಪವೂ ಕಂಡುಬಂದಿದೆ. ಅವರನ್ನು ಬಿಟ್ಟು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಇದು ʼಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗʼವೆಂಬಂತಿದೆ” ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಸಮಾವೇಶದ ಬಳಿಕ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದರು. ಲೋಪದ ಬಗ್ಗೆ ತೀವ್ರ ತರಾಟೆ ತೆಗೆದುಕೊಂಡು ಶಿಸ್ತಿನ ಕ್ರಮ ಅನಿವಾರ್ಯವಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದರೆಂಬುದು ಮೂಲಗಳಿಂದ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...