ಸುಮಾರು 25 ರಿಂದ 30 ವರ್ಷದ ಮಹಿಳೆಯ ಕುತ್ತಿಗೆ ಕೊಯ್ದು ನಂತರ ಕೆನಾಲ್ ಪಕ್ಕ ಸುಟ್ಟು ಬಿಸಾಕಿ ಹೋದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮಮದಾಪೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮಧ್ಯಾಹ್ನ 2 ಗಂಟೆಗೆ ಹೊಗೆ ಬರುವುದನ್ನು ಕಂಡ ಸ್ಥಳೀಯರು ಸ್ಥಳಕ್ಕೆ ಧಾವಿಸಿದಾಗ ಸುಟ್ಟು ಬಿದ್ದಿದ್ದ ಮಹಿಳೆಯ ಶವ ಕಂಡುಬಂದಿದೆ. ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಕೊಲೆಗೀಡಾದ ಮಹಿಳೆಯ ವಿವರ ಪತ್ತೆಯಾಗದ ಕಾರಣ ಪೊಲೀಸರು ವಿವರ ಕಲೆಹಾಕುತಿದ್ದಾರೆ.
“ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ಧಾವಿಸಿದ್ದು ತನಿಖೆ ಆರಂಭಿಸಿದ್ದಾರೆ. ಮಹಿಳೆಯನ್ನು ಬೇರೆ ಕಡೆ ಮೊದಲು ಕೊಲೆ ಮಾಡಿ ನಂತರ ಸಾಕ್ಷ್ಯವನ್ನು ನಾಶಪಡಿಸುವ ಪ್ರಯತ್ನದಲ್ಲಿ ಸುಟ್ಟು ಹಾಕಿರಬಹುದು” ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂ.ಗ್ರಾಮಾಂತರ | ಕಾರ್ಮಿಕರ ಸುಲಿಗೆ ಮಾಡುತ್ತಿದ್ದ ಮೂವರ ಬಂಧನ
ಮೃತ ಮಹಿಳೆ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಎಂಬುವ ಮಾಹಿತಿ ತನಿಖೆಯಿಂದ ಗೊತ್ತಾಗಬೇಕಾಗಿದೆ. ಘಟನಟ ಸ್ಥಳದಲ್ಲಿ ರಕ್ತದ ಕಲೆಗಳ ಗುರುತು ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
