ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆಯಾಗಿರುವ ಘಟನೆ ನಡೆದಿದೆ.
ಬೈಲಹೊಂಗಲ ಪಟ್ಟಣದ ಆಶ್ರಯ ಕೊಲೊನಿ ಶಾಲಾ ಮೈದಾನದಲ್ಲಿ ರಾತ್ರಿ 1ರ ಸುಮಾರಿಗೆ ದುಷ್ಕರ್ಮಿಗಳ ತಂಡ ರವಿ ತಿಮ್ಮನವರ(23) ಎಂಬ ಯುವಕನ ಮೇಲೆ ಕುಡಗೊಲು ಮದ್ಯದ ಬಾಟಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ರಾಜ್ಯೋತ್ಸವದಂದು ಕರಾಳ ದಿನ ಆಚರಣೆ; 46 ಮಂದಿ ಎಂಇಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲು
ಹಲ್ಲೆಯ ಪರಿಣಾಮವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತ ಪಟ್ಟಿದ್ದಾನೆ. ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಬೈಲಹೊಂಗಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.