ಬೆಳಗಾವಿ | ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 200 ಎಕರೆ ಕಬ್ಬು ಬೆಂಕಿಗಾಹುತಿ

Date:

ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಶಿರಗುಪ್ಪಿ ರಸ್ತೆ ಪಕ್ಕದ ಕಬ್ಬಿನ ಗದ್ದೆಗಳಿಗೆ ಬೆಂಕಿ ತಗುಲಿದ ಪರಿಣಾಮ 200 ಎಕರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿಗಳ ಬೆಳೆ ನಾಶವಾಗಿರುವ ಘಟನೆ ಸೋಮವಾರ ನಡೆದಿದೆ.

- Advertisement -

ಸೋಮವಾರ ಬೆಳಿಗ್ಗೆ ಸುಮಾರು 10 ಗಂಟೆಗೆ ಹೊತ್ತಿಕೊಂಡ ಬೆಂಕಿ ಮಧ್ಯಾಹ್ನ ವರೆಗೂ ನಿಯಂತ್ರಣಕ್ಕೆ ಬಾರದಿರುವದರಿಂದ ಬೆಂಕಿ ನಂದಿಸಲು ರೈತರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದು, ರಾಯಬಾಗ ಮತ್ತು ಉಗಾರ ಶುಗರ್ಸನ ಎರಡು ಅಗ್ನಿಶಾಮಕ ವಾಹನ ಹಾಗೂ ಮಹಾರಾಷ್ಟ್ರದ ದತ್ತ ಶುಗರ್ಸ್‌ ಕಾರ್ಖಾನೆ ಅಗ್ನಿಶಾಮಕ ವಾಹನಗಳು ಮತ್ತು ಸಿಬ್ಬಂದಿಗಳು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದ್ದು, ಹೆಸ್ಕಾಂ ಗೆ ಹಲವು ಬಾರಿ ಮನವಿ ಮಾಡಿಕೊಂಡರೂ ನಮ್ಮ ಮನವಿಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ಇದರಿಂದ ರೈತನಿಗೆ ನಷ್ಟ ಉಂಟಾಗುತ್ತಿದ್ದರೂ ಅಧಿಕಾರಿಗಳು ಮಾತ್ರ ಕೈ ಕಟ್ಟಿ ಕುಳಿತಿದ್ದಾರೆ ಎಂದು ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸ್ಥಳಕ್ಕೆ ತಹಶಿಲ್ದಾರ ರಾಜೇಶ ಬುರ್ಲಿ, ಪಿಎಸ್‌ಐ ಜಿ.ಜಿ. ಬಿರಾದರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...