ಬೆಳಗಾವಿ | ಶೀಘ್ರದಲ್ಲೇ 300 ಹೊಸ ಬಸ್‌ಗಳು ಬರಲಿವೆ: ಸಚಿವ ರಾಮಲಿಂಗಾ ರೆಡ್ಡಿ

Date:

Advertisements

ಬೆಳಗಾವಿ ನಗರದ ಸಾರ್ವಜನಿಕರ ಸೇವೆಗೆ 100 ವಿದ್ಯುತ್ ಚಾಲಿತ ಬಸ್‌ಗಳು ಸೇರಿದಂತೆ 300 ಬಸ್‌ಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದರು.

ಬೆಳಗಾವಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪ್ರಾದೇಶಿಕ ರಸ್ತೆ ಸಾರಿಗೆ ಕಚೇರಿ ಮತ್ತು ರಸ್ತೆ ಸಾರಿಗೆ ಜಂಟಿ ಆಯುಕ್ತರ ಕಚೇರಿಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರದ 50:50 ಅನುದಾನದೊಂದಿಗೆ ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ನಗರ ಬಸ್ ನಿಲ್ದಾಣವನ್ನು ಶೀಘ್ರದಲ್ಲೇ ಉದ್ಘಾಟಿಸಲಾಗುವುದು. ಬೈಲಹೊಂಗಲದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ ‘ಸ್ವಯಂ ಚಾಲಿತ ಚಾಲನಾ ಮಾರ್ಗ’ವನ್ನು ಉದ್ಘಾಟಿಸಲಾಗಿದೆ” ಎಂದು ಹೇಳಿದರು.

Advertisements

“ಕರ್ಕಶ ಶಬ್ದಗಳ ಹಾರ್ನ್‌ಗಳು ಮತ್ತು ತುಂಬಾ ಪ್ರಕಾಶಮಾನವಾದ ದೀಪಗಳನ್ನು ಹೊಂದಿರುವ ವಾಹನಗಳನ್ನು ಗುರುತಿಸಿ ದಂಡ ವಿಧಿಸಬೇಕು. ಸಾರಿಗೆ ಇಲಾಖೆ ಕಚೇರಿಗೆ ಮಧ್ಯವರ್ತಿಗಳ ಪ್ರವೇಶವನ್ನು ನಿರ್ಬಂಧಿಸಬೇಕು” ಎಂದು ಸೂಚನೆ ನೀಡಿದರು.

“ಸಾರಿಗೆ ಇಲಾಖೆಯನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆಯೆಂದು ಜಾರಕಿಹೊಳಿ ಹೇಳಿದರು. ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ವಾಹನ ಚಾಲನಾ ಪರವಾನಗಿಗಳನ್ನು ನೀಡಲು ಕಠಿಣ ನಿಯಮಗಳನ್ನು ಜಾರಿಗೆ ತರಬೇಕು. ಸ್ಥಳೀಯವಾಗಿ, ಡಿಜೆ ಶಬ್ದಗಳನ್ನು ಬಳಸಿ ಸಾರ್ವಜನಿಕರಿಗೆ ಹಾರ್ನ್ ಮಾಡಲು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ಅವರಿಗೆ ಎಚ್ಚರಿಕೆ ನೀಡಬೇಕು” ಎಂದು ಹೇಳಿದರು.

“ರಾಜ್ಯಾದಂತ ಎಲ್ಲ ಜಿಲ್ಲೆಗಳಿಗೆ ಹೆಚ್ಚಿನ ಬಸ್ ನಿಲ್ದಾಣಗಳ ನಿರ್ಮಾಣದ ಅವಶ್ಯಕತೆಯಿದೆ. ಸರ್ಕಾರಿ ಮಟ್ಟದಲ್ಲಿ, ಲೋಕೋಪಯೋಗಿ ಇಲಾಖೆ ಇದಕ್ಕಾಗಿ ಸ್ಥಳಗಳನ್ನು ಹಂಚಿಕೆ ಮಾಡಲು ಸಿದ್ಧವಾಗಿರುತ್ತದೆ. ಸಾರಿಗೆ ಇಲಾಖೆಯು ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆಗಳನ್ನು ರೂಪಿಸಬಹುದು” ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, “ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಬಸ್ ಸೌಲಭ್ಯಗಳ ಅಗತ್ಯವಿರುವುದರಿಂದ, ಸಾರಿಗೆ ಇಲಾಖೆ ಸಿಬ್ಬಂದಿ ಮಧ್ಯವರ್ತಿಗಳ ಪ್ರವೇಶವನ್ನು ನಿರ್ಬಂಧಿಸುವ ಮೂಲಕ ಸಾರ್ವಜನಿಕರಿಗೆ ತ್ವರಿತವಾಗಿ ಸೇವೆಗಳನ್ನು ಒದಗಿಸಬೇಕು” ಎಂದು ಮನವಿ ಮಾಡಿದರು.

ಶಾಸಕ ಆಸಿಫ್(ರಾಜು) ಸೇಠ್ ಮಾತನಾಡಿ, “ಈಗಿರುವ ಸಿಬ್ಬಂದಿ ಮೇಲಿನ ಹೊರೆ ಕಡಿಮೆ ಮಾಡಲು ಸಾಧ್ಯವಾದಷ್ಟು ಬೇಗ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು. ಇದು ಇಲಾಖೆ ಅಧಿಕಾರಿಗಳು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಒಂದೇ ಹೆಸರಿನ ಮೂವರು ಸಹೋದರರು; ಹೆಸರಿನ ಹಿಂದಿನ ಗುಟ್ಟೇನು ಗೊತ್ತಾ!

ಶಾಸಕ ಮಹಾಂತೇಶ ಕೌಜಲಗಿ, ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಯೋಗೀಶ್ ಎ ಎಂ, ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಹೆಚ್ಚುವರಿ ಸಾರಿಗೆ ಆಯುಕ್ತ ಕೆ‌ ಟಿ ಹಾಲಸ್ವಾಮಿ, ಜಂಟಿ ಸಾರಿಗೆ ಆಯುಕ್ತ ಎಂ ಪಿ ಓಂಕಾರೇಶ್ವರಿ, ಬೆಳಗಾವಿ ಆರ್‌ಟಿಒ ನಾಗೇಶ ಮುಂಡಾಸ, ಶಿವಾನಂದ ಮಗದುಮ್, ಉದಯ್ ಕುಮಾರ್ ಆರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X