ಬೆಳಗಾವಿ | ಬಿಮ್ಸ್‌ನಲ್ಲಿ 3 ತಿಂಗಳಲ್ಲೇ 41 ಶಿಶುಗಳು ಸಾವು

Date:

ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನಿರಂತರವಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದರೂ, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಜಿಲ್ಲಾಸ್ಪತ್ರೆಯಾಗಿರುವ ಬಿಮ್ಸ್‌ನಲ್ಲಿ ಪ್ರತಿದಿನ 25ಕ್ಕೂ ಹೆಚ್ಚು ಹೆರಿಗೆಗಳು ಆಗುತ್ತವೆ. ಹೀಗಾಗಿ, ಬಿಮ್ಸ್‌ಗೆ ಶಿಶುಗಳು ಮತ್ತು ತಾಯಂದಿರ ಆರೋಗ್ಯಕ್ಕಾಗಿ ಉತ್ತಮ ಆರೋಗ್ಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯವೂ ಹಲವು ವರ್ಷಗಳಿಮದ ಇದೆ. ಆದರೆ, ಹೆಚ್ಚಿನ ಸೌಲಭ್ಯಗಳು ಆಸ್ಪತ್ರೆಗೆ ದೊರೆತಿಲ್ಲ ಎಂಬ ಆರೋಪಗಳಿವೆ. ಈ ನಡುವೆ, ಮೂರೇ ತಿಂಗಳಲ್ಲಿ 41 ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬಿಮ್ಸ್‌ ಆಸ್ಪತ್ರೆಯಲ್ಲಿ ಆಗಸ್ಟ್‌ನಲ್ಲಿ 12, ಸೆಪ್ಟಂಬರ್​ನಲ್ಲಿ 18 ಹಾಗೂ ಅಕ್ಟೋಬರ್​ನಲ್ಲಿ 11 ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯಲ್ಲಿರುವ ಏರ್‌ ಕಂಪ್ರೆಸರ್ ಕೆಟ್ಟಿರುವುದೇ ಶಿಶುಗಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ಆಸ್ಪತ್ರೆಯಲ್ಲಿ ಎರಡು ಏರ್ ಕಂಪ್ರೆಸರ್‌ಗಳಿವೆ. ಅವುಗಳಲ್ಲಿ ಒಂದು ಏರ್‌ ಕಂಪ್ರೆಸರ್‌ ಮೂರು ತಿಂಗಳ ಹಿಂದೆಯೇ ಕೆಟ್ಟಿದೆ. ಇನ್ನೂ ಅದನ್ನು ರಿಪೇರಿ ಮಾಡಿಲ್ಲ. ಪರಿಣಾಮ, ಶಿಶುಗಳಿಗೆ ಸರಿಯಾಗಿ ಆಮ್ಲಜನಕ ಪೂರೈಕೆಯಾಗದೆ, ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

“ಶಿಶುಗಳು ಸಾವನ್ನಪ್ಪಿರುವುದ ಸತ್ಯ. ಸಾವಿಗೆ ಕಾರಣಗಳೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಒಂದು ಏರ್‌ ಕಂಪ್ರೆಸರ್ ಕೆಟ್ಟಿದೆ. ಹೊಸ ಏರ್ ಕಂಪ್ರೆಸರ್ ಖರೀದಿಗೆ ಟೆಂಡರ್ ಕರೆಯಲಾಘಿದೆ. ಅವಧಿಪೂರ್ವ ಪ್ರಸವ, ಶಿಶುಗಳ ತೂಕ ಕಡಿಮೆ ಸೆರಿದಂತೆ ನಾನಾ ಕಾರಣಗಳಿಂದ ಮಕ್ಕಳು ಸಾವನ್ನಪ್ಪಿದ್ದಾರೆ” ಎಂದು ಬಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಅಶೋಕ ಶೆಟ್ಟಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...