ಬೆಳಗಾವಿ | ಜಿಲ್ಲೆಯಲ್ಲಿ 688 ಮತಗಟ್ಟೆಗಳು ನಿರ್ಣಾಯಕ ಮತ್ತು ಅತೀ ಸೂಕ್ಷ್ಮ: ಜಿಲ್ಲಾಧಿಕಾರಿ

Date:

  • ಕಳೆದ ಚುನಾವಣೆಯಲ್ಲಿ ಕೆಲವು ಮತಗಟ್ಟೆಗಳಲ್ಲಿ 90%ಕ್ಕಿಂತ ಹೆಚ್ಚು ಮತದಾನ
  • ಚುನಾಯಿತ ಅಥವಾ ನಾಮನಿರ್ದೇಶಿತ ಸದಸ್ಯರ ಕಚೇರಿಗಳು ಜಿಲ್ಲಾಡಳಿತದ ವಶಕ್ಕೆ

ಬೆಳಗಾವಿ ಜಿಲ್ಲೆಯಲ್ಲಿ 688 ಮತಗಟ್ಟೆಗಳನ್ನು ನಿರ್ಣಾಯಕ ಮತ್ತು ಅತೀ ಸೂಕ್ಷ್ಮವೆಂದು ಗುರುತಿಸಲಾಗಿದೆ. ಆ ಎಲ್ಲ ಕೇಂದ್ರಗಳಲ್ಲಿ ಮತದಾನವನ್ನು ವೆಬ್‌ಕಾಸ್ಟ್ ಮಾಡಿ ವೀಡಿಯೊಗ್ರಾಫ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕಳೆದ ಚುನಾವಣೆಯಲ್ಲಿ ಈ ಮತಗಟ್ಟೆಗಳಲ್ಲಿ 90%ಕ್ಕಿಂತ ಹೆಚ್ಚು ಮತದಾನವಾಗಿದೆ. ಒಬ್ಬ ಅಭ್ಯರ್ಥಿ 75% ಅಥವಾ ಅದಕ್ಕಿಂತ ಹೆಚ್ಚಿನ ಮತಗಳನ್ನು ಪಡೆದ ಮತಗಟ್ಟೆಗಳನ್ನು ನಿರ್ಣಾಯಕವೆಂದು ಪರಿಗಣಿಸಲಾಗುತ್ತದೆ. ಅಂತೆಯೇ, ಕಳೆದ ಚುನಾವಣೆಯಲ್ಲಿ ಮತದಾರರಿಗೆ ಬೆದರಿಕೆ ಹಾಕಿರುವ ಘಟನೆಗಳು ನಡೆದಿರುವ ಬೂತ್‌ಗಳನ್ನು ಅತೀ ಸೂಕ್ಷ್ಮವೆಂದು ಪರಿಗಣಿಸಲಾಗಿದೆ,” ಎಂದರು.

“ಜಿಲ್ಲೆಯಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಎಲ್ಲ ಸರ್ಕಾರಿ ಅತಿಥಿ ಗೃಹಗಳಲ್ಲಿ ರಾಜಕೀಯ ಸಭೆಗಳನ್ನು ನಿಷೇಧಿಸಲಾಗಿದೆ. ರಾಜಕೀಯ ಮುಖಂಡರಿಗೆ ಕೊಠಡಿ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದೂ ಅವರು ತಿಳಿಸಿದರು.

“ಚುನಾಯಿತ ಅಥವಾ ನಾಮನಿರ್ದೇಶಿತ ಸದಸ್ಯರ ಕಚೇರಿಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಜೊತೆಗೆ, ರಾಜಕೀಯ ಮುಖಂಡರಿಗೆ ನೀಡಲಾದ ವಾಹನಗಳು ಸೇರಿದಂತೆ ಎಲ್ಲ ಸರ್ಕಾರಿ ಸೌಲಭ್ಯಗಳನ್ನು ಹಿಂಪಡೆಯಲಾಗುತ್ತಿದೆ. ರಾಜಕೀಯ ಪಕ್ಷಗಳ ವಾಲ್ ಪೋಸ್ಟರ್, ಕಟೌಟ್, ಬ್ಯಾನರ್, ಹೋರ್ಡಿಂಗ್‌ಗಳನ್ನು ತೆರವುಗೊಳಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

“ಎಲ್ಲ ವರ್ಗಾವಣೆ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಗಿದೆ. ವರ್ಗಾವಣೆ ಆದೇಶ ಬಂದಿದ್ದರೂ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಆ ಆದೇಶಗಳಿಗೆ ತಡೆ ನೀಡಲಾಗಿದೆ. ಸರ್ಕಾರಿ ನೌಕರರ ಎಲ್ಲ ರಜೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ತಮ್ಮ ವ್ಯಾಪ್ತಿಯಿಂದ ಹೊರಹೋಗದಂತೆ ಕೇಳಲಾಗಿದೆ,” ಎಂದು ಪಾಟೀಲ್ ವಿವರಿಸಿದರು.

“ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಎಲ್ಲ ಸರ್ಕಾರಿ ಮಂಡಳಿಗಳು ಮತ್ತು ನಿಗಮಗಳನ್ನು ಅಮಾನತುಗೊಳಿಸಲಾಗಿದೆ. ಮತದಾರರ ಮೇಲೆ ಪ್ರಭಾವ ಬೀರುವ ಎಲ್ಲ ರಾಜಕೀಯ ಸಭೆಗಳು ಮತ್ತು ಸಮಾವೇಶಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಎಲ್ಲ ಯೋಜನೆಗಳು ಸ್ಥಗಿತಗೊಂಡಿವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಎಫ್‌ಐಆರ್‌ ರದ್ದು ಕೋರಿ ಬಿಜೆಪಿ ಶಾಸಕ ಸಲ್ಲಿಸಿದ್ದ ಅರ್ಜಿ ವಜಾ

“ಬೆಳಗಾವಿ ಜಿಲ್ಲೆ 18 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಇದರಲ್ಲಿ ಎರಡು ಪರಿಶಿಷ್ಟ ಜಾತಿ ಮತ್ತು ಒಂದು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. 41,720 ವಿಶೇಷಚೇತನ ಮತದಾರರಿದ್ದು, 80 ವರ್ಷ ದಾಟಿದ 1,00,019 ಮತದಾರರಿದ್ದಾರೆ. ಇವರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು” ಎಂದು ಜಿಲ್ಲಾಧಿಕಾರಿ ಪಾಟೀಲ್ ತಿಳಿಸಿದರು.

ಎಸ್‌ಪಿ ಸಂಜೀವ್ ಪಾಟೀಲ್ ಮತ್ತು ನಗರ ಪೊಲೀಸ್ ಆಯುಕ್ತ ಎಂ.ಬಿ ಬೋರಲಿಂಗಯ್ಯ ಮಾತನಾಡಿ, “ಜಿಲ್ಲೆಯಲ್ಲಿ ಒಟ್ಟು 61 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಮಹಾರಾಷ್ಟ್ರ ಮತ್ತು ಗೋವಾ ಗಡಿಯಲ್ಲಿ ಸ್ಥಾಪಿಸಲಾದ 24 ಅಂತಾರಾಜ್ಯ ಚೆಕ್‌ಪೋಸ್ಟ್‌ಗಳು ಒಳಗೊಂಡಿವೆ. ಉಳಿದ 37 ಅಂತರ್ ಜಿಲ್ಲಾ ಚೆಕ್‌ಪೋಸ್ಟ್‌ಗಳಾಗಿವೆ” ಎಂದರು.

“ಇದುವರೆಗೆ ದಾಖಲೆ ಇಲ್ಲದ 17,780,120 ರೂ. ನಗದು, 1,73,41,668 ರೂ. ಮೌಲ್ಯದ 22,826 ಲೀಟರ್ ಅಕ್ರಮ ಮದ್ಯ, 2,47,200 ರೂ. ಮೌಲ್ಯದ 33.91 ಕೆಜಿ ತೂಕದ ಡ್ರಗ್ಸ್ ಸೇರಿಂದಂತೆ ಹಲವು ವಸ್ತುಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ವಶಕ್ಕೆ ಪಡೆಯಲಾಗಿದೆ” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...

ಬೆಂಗಳೂರು | ನ. 29ರಂದು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ-ಉರ್ದು ಕವಿಗೋಷ್ಠಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ...