ಗೋಕಾಕ್ | ಕೋ-ಆಪರೇಟಿವ್‌ ಬ್ಯಾಂಕ್‌ನಿಂದ ₹74 ಕೋಟಿ ವಂಚನೆ ಆರೋಪ: 14 ಜನರ ವಿರುದ್ಧ ದೂರು ದಾಖಲು

Date:

Advertisements

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕಿನಲ್ಲಿ 74.87 ಕೋಟಿ ವಂಚನೆಯ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್‌ 14 ಸಿಬ್ಬಂದಿಗಳ ವಿರುದ್ಧ ಬ್ಯಾಂಕ್ ಠೇವಣಿದಾರರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಫಿಕ್ಸ್ ಡೆಪಾಸಿಟ್ ಮಾಡಿದ ಹಣದ ಮೇಲೆ ಸಿಸಿ ಮತ್ತು ಡೆಪಾಸಿಟ್ ಸಾಲ, ಪಿಗ್ನಿ ಸಾಲ ಎಂದು ಹೇಳಿ ಪಡೆದು ವಂಚನೆ ಮಾಡಿದ್ದಾರೆ. ಸಾಲ ಪಡೆಯುವ ಮುನ್ನ 6 ಕೋಟಿ 90 ಲಕ್ಷ ಡೆಪಾಸಿಟ್ ಮಾಡಿದ್ದ ಖದೀಮರು, ಇದೇ ಹಣದ ಮೇಲೆ ಬರೋಬ್ಬರಿ 74 ಕೋಟಿ ಸಾಲದ ರೂಪದಲ್ಲಿ ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

2021ರಿಂದ 2024ರ ವರೆಗೆ ಬ್ಯಾಂಕಿನ ಓರ್ವ ಸಿಬ್ಬಂದಿ ಸೇರಿದಂತೆ 14 ಜನರು ಹಣವನ್ನು ಲೂಟಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಸಾಗರ ಸಬಕಾಳೆ, ವಿಶ್ವನಾಥ ಬಾಗಡೆ, ಸಂಭಾಜೀ ಗುರುಪಾದೆ, ಸಿದ್ದಪ್ಪ ಪವಾರ, ದಯಾನಂದ ಉಪ್ಪಿನ ಸೇರಿ ತಮ್ಮ‌ ಸಂಬಂಧಿಕರ ಜೊತೆಗೂಡಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಂಜನಾ ಸಬಕಾಳೆ, ಮಲ್ಲವ್ವ ಸಬಕಾಳೆ, ಗೌರವ್ವ ಹವಾಲ್ದಾರ, ಚಂದ್ರವ್ವ ಹವಾಲ್ದಾರ, ಪರಸಪ್ಪ ಮಾಳೋಜಿ, ರಾಧಾ ಮಾಳೋಜಿ, ಸಂದೀಪ ಮರಾಠೆ ಹಾಗು ಕಿರಣ ಸುಪಾಲಿ ಎಂಬವರ ವಿರುದ್ಧ ವಂಚನೆ ಆರೋಪ ಹೊರಿಸಲಾಗಿದೆ.

Advertisements

ಜುಲೈ 2021ರಿಂದ ಏಪ್ರಿಲ್ 2023ರವರೆಗಿನ ಅವಧಿಯಲ್ಲಿ ಬ್ಯಾಂಕ್‌ಗೆ ವಂಚಿಸಲಾಗಿದೆ. ಈ‌ ಮೊದಲು ಹಂತ ಹಂತವಾಗಿ 6.97 ಕೋಟಿ‌ ಹಣವನ್ನು ಆರೋಪಿಗಳು ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದರು. ಆದರೆ ಮೂರು ವರ್ಷಗಳ ಅವಧಿಯಲ್ಲಿ ‌ಒಟ್ಟು 81.83 ಕೋಟಿ ಹಣವನ್ನು ಆರೋಪಿಗಳು ಸಾಲ ಪಡೆದಿದ್ದರು. ವಾಪಸ್ ಕಟ್ಟಬೇಕಿರುವ 74.86 ಕೋಟಿ‌ ಸಾಲ ಪಾವತಿಸದೇ ವಂಚಿಸಲಾಗಿದೆ. ಬ್ಯಾಂಕ್‌ನಲ್ಲಿ ಇದ್ದುಕೊಂಡೇ ಸಂಬಂಧಿಕರು,‌ ಸ್ನೇಹಿತರಿಗೆ ಸಿಬ್ಬಂದಿಗಳು ಲೋನ್ ಮಂಜೂರು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಅಲ್ಲದೇ, ಈ ಕುರಿತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಅವರಿಗೂ ಮಾಹಿತಿ ನೀಡಿದ್ದಾರೆ.

ಗೋಕಾಕ್ 1

ಬ್ಯಾಂಕ್ ಸಿಬ್ಬಂದಿ ಹಣ ಲಪಟಾಯಿಸಿರುವ ಘಟನೆ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಗ್ರಾಹಕರು ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸಿಬ್ಬಂದಿ ಮತ್ತು ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಾವು ಕಷ್ಟಪಟ್ಟು ದುಡಿದ ಹಣ ಠೇವಣಿ ಇಟ್ಟಿದ್ದೇವೆ. ನಮ್ಮ ಹಣ ನಮಗೆ ಮರಳಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷ ಜಿತೇಂದ್ರ ಮಾಂಗಳೇಕರ ಠೇವಣಿದಾರರ ಹಣ ಸುರಕ್ಷಿತವಾಗಿದೆ ಎಂದು ಠೇವಣಿದಾರರಿಗೆ ಲಿಖಿತವಾಗಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲ ಸೇವೆಗೂ ನಂದಿನಿ ತುಪ್ಪ ಬಳಸಿ; ಸರ್ಕಾರದಿಂದ ಹೊಸ ಆದೇಶ

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್, “ಎರಡು ದಿನಗಳ ಹಿಂದೆ ಮಹಾಲಕ್ಷ್ಮಿ ಬ್ಯಾಂಕ್ ‌ಚೇರ್ಮನ್ ಜೀತೇಂದ್ರ ದೂರು ನೀಡಿದ್ದಾರೆ. ಬ್ಯಾಂಕ್ ಸಿಬ್ಬಂದಿ ಸೇರಿ 14 ಆರೋಪಿಗಳು ಸಾಲ ಪಡೆದು ಹಣ ವಾಪಸ್ ಮರಳಿಸದೇ ಮೋಸ ಮಾಡಿದ್ದಾರೆ. ಮೊದಲು ಆರು ಕೋಟಿ ರೂ. ಠೇವಣಿ ಇಟ್ಟು ಬಳಿಕ 74.86 ಕೋಟಿ ಸಾಲ ಪಡೆದಿದ್ದಾರೆ. ಸಾಲ ಮರುವಾಪತಿಸದೇ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ” ಎಂದು ತಿಳಿಸಿದ್ದಾರೆ.

“ಈ ಬ್ಯಾಂಕ್‌ ಗೋಕಾಕನಲ್ಲಿ ಎರಡು, ಚಿಕ್ಕೋಡಿ, ನಿಪ್ಪಾಣಿ, ಘಟಪ್ರಭಾ, ಬೆಳಗಾವಿಯಲ್ಲಿ ತಲಾ ಒಂದು ಬ್ರ್ಯಾಂಚ್ ಹೊಂದಿದೆ. 3 ಸಾವಿರ ಠೇವಣಿದಾರರು ಇದ್ದು, ಏಪ್ರಿಲ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ಶೋಧ ಕಾರ್ಯಕ್ಕೆ ಮೂರು ತಂಡ‌ ರಚನೆ ಮಾಡಲಾಗಿದೆ. ಈ ಕುರಿತು ಮೇಲಾಧಿಕಾರಿಗಳ ಜೊತೆಗೆ ಚರ್ಚಿಸಿ, ಪ್ರಕರಣ ಸಿಐಡಿಗೆ ವರ್ಗಾಯಿಸುವ ಬಗ್ಗೆ ನಿರ್ಧರಿಸಲಾಗುವುದು” ಎಂದು ಎಸ್​ಪಿ ಡಾ.ಭೀಮಾಶಂಕರ ಗುಳೇದ್ ಪ್ರತಿಕ್ರಿಯಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X