16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಬರುವ ಅಕ್ಟೋಬರ್ 24, 25 ರಂದು ಬೆಳಗಾವಿ ಜಿಲ್ಲೆ ಮೂಡಲಗಿಯ ಆರ್.ಡಿ.ಎಸ್. ಸಂಸ್ಥೆಯ ಆವರಣದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಈ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಗೋಕಾಕದ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ್ ಅಕ್ಕಿ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ನೆರವೇರಿಸುವರು.
ಇದನ್ನು ಓದಿದ್ದೀರಾ? ಬೆಳಗಾವಿ | ನಷ್ಟದ ಆತಂಕ ಎದುರಿಸುತ್ತಿರುವ ಸೋಯಾಬೀನ್ ಬೆಳೆದ ಬೆಳೆಗಾರರು!