ಬೆಳಗಾವಿ | ಉದ್ಯಮಿ ಅಪರಹಣ ಪ್ರಕರಣ; ಪ್ರಮುಖ ಆರೋಪಿ ಮಂಜುಳಾ ರಾಮನಗಟ್ಟಿ ಬಂಧನ

Date:

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ ಅಂಬಿ ಅವರನ್ನು ಅಪಹರಿಸಿ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೋಕಾಕ್‌ನ ಕೊಣ್ಣೂರು ಮೂಲದ ಮಂಜುಳಾ ರಾಮನಗಟ್ಟಿಯನ್ನು ಬಂಧಿಸಲಾಗಿದೆ.

- Advertisement -

ತಾಲೂಕಿನ ತಹಶೀಲ್ದಾರ್‌ ಕಚೇರಿಯಲ್ಲಿ ಡಿ ಗ್ರೂಪ್‌ ಹಾಗೂ ಹೊರಗುತ್ತಿಗೆ ನೌಕರಿ ಕೊಡಿಸುವುದಾಗಿ ಇಬ್ಬರಿಂದ ತಲಾ ₹2.5 ಲಕ್ಷ ಲಂಚ ಪಡೆದಿರುವುದಾಗಿ ಕುಲಗೋಡ ಪೊಲೀಸ್‌ ಠಾಣೆಯಲ್ಲಿ ಮಂಜುಳಾ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಜುಳಾ ಜತೆಗೆ ಯಲ್ಲೇಶ ವಾಲಿಕಾರ ಹಾಗೂ ಪರಶುರಾಮ ಕಾಂಬಳೆಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಎಸ್‌ಪಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಒಂದು ರಾಜಕೀಯ ಪಕ್ಷದೊಂದಿಗೆ ಆಕೆ ಗುರುತಿಸಿಕೊಂಡಿದ್ದಾರೆ. ಆದರೆ ಅಪರಹರಣಕ್ಕೂ ಆ ರಾಜಕೀಯ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ಮಂಜುಳಾ ಬಂಧಿಸದಂತೆ ಯಾವ ರಾಜಕಾರಣಿಯೂ ಪ್ರಭಾವ ಬೀರಿಲ್ಲ. ಹಾಗಿದ್ದಿದ್ದರೆ 7 ಮಂದಿಯನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ” ಎಂದರು.

“ಬಸವರಾಜ ಅಂಬಿ ಅವರ ಅಪಹರಣಕ್ಕೆ ಮಂಜುಳಾ ಅವರೇ ಸಂಚು ರೂಪಿಸಿದ್ದರು. ಹಣ ಪಡೆದು ಐಶಾರಾಮಿ ಜೀವನ ನಡೆಸುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇನ್ನು ಬಸವರಾಜು ಬಳಿ ಕಸಿದುಕೊಂಡಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ 6 ಮೊಬೈಲ್‌, 4 ಕಾರು ಸೇರಿದಂತೆ ಇತರೆ ವಸ್ತುಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ

ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಮಹಿಳೆ ಮಂಜುಳಾ ರಾಮನಗಟ್ಟಿ ಕಾಂಗ್ರೆಸ್‌ ಕಾರ್ಯಕರ್ತೆ ಅಲ್ಲ. ಅವರಿಗೆ ಪಕ್ಷದ ಯಾವುದೇ ಹುದ್ದೆ ಅಥವಾ ಸದಸ್ಯತ್ವ ನೀಡಿಲ್ಲ ಎಂದು ಕಾಂಗ್ರೆಸ್ ಬೆಳಗಾವಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...