ಬೆಳಗಾವಿ | ಜಿಲ್ಲಾಧಿಕಾರಿ ಮನೆ ಮುಂದಿನ ವಿದ್ಯುತ್ ಕಂಬಕ್ಕೆ ಹಾಲಿನ ವಾಹನ ಡಿಕ್ಕಿ

Date:

  • ಮಂಜು ಮುಸುಕಿದ ವಾತವರಣದಿಂದ ನಡೆದ ಅಪಘಾತ
  • ಜಿಲ್ಲಾಧಿಕಾರಿ ಮನೆ ಮುಂದೆ ತಪ್ಪಿದ ಭಾರಿ ದುರಂತ

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಸರ್ಕಾರಿ ನಿವಾಸದ ಮುಂದೆ ಇದ್ದ ಹೈ ವೋಲ್ಟೇಜ್ ವಿದ್ಯುತ್ ಕಂಬಕ್ಕೆ ಹಾಲು ಸಾಗಿಸುವ ಗೂಡ್ಸ್‌ ವಾಹನವು ಡಿಕ್ಕಿ ಹೊಡೆದಿದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ.

ಶನಿವಾರ ಮುಂಜಾನೆ ಈ ಅಪಘಾತ ನಡೆದಿದೆ. ಎಲ್ಲೆಡೆ ಮಂಜು ಮುಸುಕಿದ ವಾತಾವರಣ ಇದ್ದುದ್ದರಿಂದ ಈ ಅಪಘಾತ ಸಂಭವಿಸಿತು ಎಂದು ಗೂಡ್ಸ್‌ ವಾಹನದ ಚಾಲಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.

ಜಿಲ್ಲಾಧಿಕಾರಿ ಮನೆ ಇರುವ ವಿಶ್ವೇಶ್ವರಯ್ಯ ನಗರದಲ್ಲಿ ಸಾರ್ವಜನಿಕರ ಸಂಚಾರ ಹೆಚ್ಚಾಗಿದ್ದು, ಪ್ರತಿ ದಿನ ಮುಂಜಾನೆ ಹಿರಿಯ ನಾಗರಿಕರು ಹಾಗೂ ಮಕ್ಕಳು ವಾಯು ವಿಹಾರಕ್ಕೆಂದು ಬರುತ್ತಿರುತ್ತಾರೆ. ಇವರೆಲ್ಲರೂ ಇದ್ದಾಗ ಅಪಘಾತ ಸಂಭವಿಸಿದ್ದರೆ ಭಾರಿ ಅನಾಯುತ ಆಗುತ್ತಿತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? : ಜಾರ್ಖಂಡ್ | ಗೋಮಾಂಸ ಹೊಂದಿದ್ದ ವ್ಯಕ್ತಿ ಮೇಲೆ ಗುಂಪು ಹಲ್ಲೆ; ಪೊಲೀಸರ ರಕ್ಷಣೆ

ಹಾಲಿನ ಗೂಡ್ಸ್‌ ವಾಹನವು ಇಲ್ಲಿಗೆ ಬರುವಷ್ಟರಲ್ಲಿ ಕೆಲವು ಘಟಕಗಳಿಗೆ ಹಾಲನ್ನು ಸರಭರಾಜು ಮಾಡಿತ್ತು. ಅಪಘಾತವಾದ ನಂತರ, ಬೇರೊಂದು ವಾಹನ ತಂದು ಗಾಡಿಯಲ್ಲಿದ್ದ ಹಾಲನ್ನು ಸ್ಥಳಾಂತ ಮಾಡಲಾಯಿತು.

ಅಪಘಾತದ ರಭಸಕ್ಕೆ ಗೂಡ್ಸ್‌ ವಾಹನದ ಮುಂಭಾಗವು ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣಪುಟ್ಟಗಾಯಗಳಾಗಿವೆ. ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...