ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಅಣ್ಣ ತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಜಮಿನಿನ ರಸ್ತೆ ವಿಚಾರವಾಗಿ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರ ನಡುವೆ ಜಗಳ ನಡೆಯುತ್ತಿತ್ತು. ಈ ವಿಚಾರವಾಗಿ ಪೋಲಿಸ್ ಠಾಣೆಗೆ ದೂರು ನೀಡಲು ಹೋಗಿದ್ದ ಅಣ್ಣ ತಮ್ಮಂದಿರ ನಡುವೆ ರಾಜೀ ಪಂಚಾಯ್ತಿ ಮಾಡೋಣ ಎಂದು ಪೋಲಿಸರು ಬುದ್ಧಿ ಹೇಳಿ ಕಳುಹಿಸಿದ್ದರು. ಆದರೆ ಮತ್ತೆ ಜಗಳ ಪ್ರಾರಂಭವಾಗಿ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ? ಬೆಳಗಾವಿ | ಪೋಷಣ್ ಆ್ಯಪ್ ಹ್ಯಾಕ್; ಲಿಂಕ್ ಕಳುಹಿಸಿ ನಿಮ್ಮ ಹಣ ವಂಚಿಸುತ್ತಾರೆ: ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ
ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸುನಿಲ ಖೋತ್ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾನೆ. ಸುನಿಲ ಖೋತ್ ಶಮನೇವಾಡಿ ಗ್ರಾಮದ ನಿವಾಸಿಯೆಂದು ತಿಳಿದುಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ಸದಲಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.