ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಂತರ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯ ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈರಪ್ಪ ಕರಡಿ ಮೃತಪಟ್ಟ ವ್ಯಕ್ತಿ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್ ಕೊಡುವ ಆಸೆ ತೋರಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಬಾಲಕಿ ವಿಷಯವನ್ನು ತನ್ನ ಪಾಲಕರಿಗೆ ತಿಳಿಸಿದ್ದಳು. ಇದರಿಂದ ಹೆದರಿದ ಆರೋಪಿ ನೇಣು ಹಾಕಿಕೊಂಡಿರಬಹುದು ಎಂದು ಪ್ರಾಥಮಿಕ ಮೂಲಗಳು ಮಾಹಿತಿ ನೀಡಿವೆ.
ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಸುವರ್ಣಸೌಧದ ಎದುರು ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ
ಶವವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
