ಬೆಳಗಾವಿ ಜಿಲ್ಲೆಯ ಗೋಕಾಕ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರ ಸುಭಾಷ ರಾಮಚಂದ್ರ ಬಾಗಾಯಿ (37) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆಸ್ಪತ್ರೆಗೆ ಭಾನುವಾರ ರಜೆ ಇದ್ದ ಕಾರಣ, ಬಹುತೇಕ ರೋಗಿಗಳು ಆಸ್ಪತ್ರೆಯಲ್ಲಿ ಇರಲಿಲ್ಲ. ಆಸ್ಪತ್ರೆಯ ಎಲ್ಲ ಬೀಗದ ಕೈಗಳು ಸುಭಾಷ ಬಳಿಯೇ ಇದ್ದವು. ಭಾನುವಾರ ರಾತ್ರಿಯೇ ಆಸ್ಪತ್ರೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.
ಈ ವರದಿ ಓದಿದ್ದೀರಾ? ಧಾರವಾಡ | ಕಾರು-ಬೈಕ್ ಡಿಕ್ಕಿ: ಓರ್ವ ಸಾವು; ಇಬ್ಬರಿಗೆ ಗಾಯ
ಸುಭಾಷ್ ಗೋಕಾಕ ತಾಲ್ಲೂಕಿನ ಲೊಳಸೂರ ಗ್ರಾಮದ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.