ಬೆಳಗಾವಿ | ಬಿಮ್ಸ್​ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು

Date:

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಭಾನುವಾರ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ಆಸ್ಪತ್ರೆ ಎದುರು ಬಾಣಂತಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕ್ರಮಕ್ಕೆ ಆಗ್ರಹಿಸಿದ್ದಾರೆ.

- Advertisement -

ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ ಮೃತ ದುರ್ದೈವಿ. ವೈಶಾಲಿ ಅವರಿಗೆ ಶನಿವಾರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಅವರನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಇರದಿದ್ದ ಕಾರಣ, ಬಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅವರಿಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಆದರೆ, ಭಾನುವಾರ ಬೆಳಗ್ಗೆ ವೈಶಾಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ, ಐಸಿಯುಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವೈಶಾಲಿ ಮೃತಪಟ್ಟಿದ್ದಾರೆ.

ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬದರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗತ್ಯವಿಲ್ಲದ ಯಾವುದೋ ಮಾತ್ರೆಗಳನ್ನು ಕೊಟ್ಟಿದ್ದರಿಂದಲೇ ಆಕೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ. ಬಾಣಂತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬಂದ ಬಳಿಕ, ಸಾವಿನ ಸತ್ಯ ತಿಳಿದಿದೆ ಎಂದು ಹೇಳಲಾಗಿದೆ.

ಬಿಮ್ಸ್‌ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ. ಅಲ್ಲದೆ, ಜಿಲ್ಲೆಯಲ್ಲಿ ಕಳೆದ ಆರು ತಿಂಗಳೊಳಗೆ ಒಟ್ಟು 322 ನವಜಾತ ಶಿಶುಗಳು ಮತ್ತು 29 ತಾಯಂದಿರು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸುದ್ದಿ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇದೀಗ, ಜಿಲ್ಲಾಸ್ಪತ್ರೆಯ್ಲಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...