ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆಯ ಎಎಸ್ಐ ಶಂಭು ಮೆತ್ರಿ (50) ಆತ್ಮಹತ್ಯೆಗೆ ಶರಣಾಗಿದ್ದಾರೆ.
- Advertisement -
ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಂಭು ತಮ್ಮ ಸ್ವಗ್ರಾಮ ಅನಂತಪುರದಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿದ್ದಾರೆ.




