ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕಾಮುಕ ಪತಿಯನ್ನು ಮಹಿಳೆಯೊಬ್ಬರು ಹತ್ಯೆಗೈದು, ಆತನ ಮೃತದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಗದ್ದೆಯಲ್ಲಿ ಬಿಸಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ನಡೆಸಿದೆ. ಕೊಲೆಯಾದ ವ್ಯಕ್ತಿಯನ್ನು ಶ್ರೀಮಂತ ಇಟ್ನಾಳೆ ಎಂದು ಗುರುತಿಸಲಾಗಿದೆ. ಆತನನ್ನು ಆತನ ಪತ್ನಿ ಸಾವಿತ್ರ ಕೊಲೆ ಮಾಡಿದ್ದಾರೆ.
ಮದ್ಯ ವ್ಯಸನಕ್ಕೆ ತುತ್ತಾಗಿದ್ದ ಶ್ರೀಮಂತ ಇಟ್ನಾಳೆ ಮನೆಯಲ್ಲಿ ದಿನನಿತ್ಯ ಜಗಳ ಮಾಡುತ್ತಿದ್ದ. ಹಣಕ್ಕಾಗಿ ಬೇರೆ ಪುರುಷರೊಂದಿಗೆ ಮಲಗುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ, ತನ್ನ ಕಾಮವಾಂಚೆ ತೀರಿಸಿಕೊಳ್ಳಲು ಮಗಳ ಮೇಲೆಯೇ ಅತ್ಯಾಚಾರ ಎಸಗಲು ಯತ್ನಿಸಿದ್ದ ಎಂದು ಹೇಳಲಾಗಿದೆ.
ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಇಟ್ನಾಳೆಯನ್ನು ಆತನ ಪತ್ನಿ ಸಾವಿತ್ರಿ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಬಳಿಕ, ಇಟ್ನಾಳೆಯ ಮೃಹದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಗದ್ದೆಯಲ್ಲಿ ಎಸೆದಿದ್ದಾರೆ ಎಂದು ವರದಿಯಾಗಿದೆ.
ಈ ವರದಿ ಓದಿದ್ದೀರಾ?: ಆಹಾರ ಸಮಾನತೆಗೆ ಸರ್ಕಾರದಿಂದ ಮತ್ತೊಂದು ಸ್ವಾಗತಾರ್ಹ ಹೆಜ್ಜೆ
ಜಮೀನಿನಲ್ಲಿ ಮೃತದೇಹವನ್ನು ಕಂಡ ಸ್ಥಳೀಯರು ಚಿಕ್ಕೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತಿನಿಖೆ ಆರಂಭಿಸಿದ್ದಾರೆ. ಸಾವಿತ್ರಿ ಅವರ ಮೇಲೆ ಅನುಮಾನಗೊಂಡು ವಿಚಾರಣೆಗೆ ಒಳಪಡಿಸಿದಾಗ, ತಾನೇ ಕೊಲೆ ಮಾಡಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.