ಬೆಳಗಾವಿ | ಎಟಿಎಂಗೆ ತಾನೇ ತುಂಬಿಸಿದ ಹಣವನ್ನು ತಾನೇ ಕದ್ದ ಬ್ಯಾಂಕ್‌ ಸಿಬ್ಬಂದಿ

Date:

ಬ್ಯಾಂಕ್‌ ಸಿಬ್ಬಂದಿಯೊಬ್ಬ ಎಟಿಎಂಗೆ ಹಣ ತುಂಬಿಸಿ, ಬಳಿಕ ಆ ಹಣವನ್ನು ತಾನೇ ಕದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬೆಳಗಾವಿಯ ಹೆಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಸ್ಟೋಡಿಯನ್‌ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣಾ ಸುರೇಶ್ ದೇಸಾಯಿ ಬಂಧಿತ ಆರೋಪಿ. ಈತ ಎಟಿಎಂನಲ್ಲಿ ಹಣ ಕದ್ದಿದ್ದು, ಕದ್ದ ಹಣದಲ್ಲಿ ತನ್ನ ತಾಯಿಗೆ ಚಿನ್ನದ ಸರ ಮಾಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆರೋಪಿ ಕೃಷ್ಣ ನಿತ್ಯ ಬ್ಯಾಂಕ್‌ನಿಂದ ಹಣ ತಂದು ನಗರದ ಎಲ್ಲ ಹೆಚ್‌ಡಿಎಫ್‌ಸಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದರು. ನವೆಂಬರ್ 26ರಂದು ಬೆಳಗಾವಿಯ ಕೋರ್ಟ್ ಎದುರಿನ ಹೆಚ್‌ಡಿಎ‌ಫ್‌ಸಿ ಎಟಿಎಂಗೆ ಎಂದಿನಂತೆ ಹಣ ಹಾಕಿ ಹೋಗಿದ್ದಾರೆ. ಅದಾದ, 2 ಗಂಟೆಗೆ ಬಳಿಕ ಮತ್ತೆ ಎಟಿಎಂಗೆ ಬಂದ ಕೃಷ್ಣಾ, ಎಟಿಎಂನ ಲಾಕ್ ಓಪನ್ ಮಾಡಿ 8.65 ಲಕ್ಷ ರೂ. ಹಣ ಕದ್ದು ಪರಾರಿಯಾಗಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಎಟಿಎಂನಲ್ಲಿ ಹಣ ಕಳ್ಳತನವಾಗಿರುವ ಬಗ್ಗೆ ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಅಧಿಕಾರಿಗಳು ಬೆಳಗಾವಿಯ ಮಾರ್ಕೆಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾದ ವಿಡಿಯೋಗಳನ್ನು ಪರಿಶೀಲಿಸಿದ್ದು, ಆರೋಪಿ ಕೃಷ್ಣಾನನ್ನು ಬಂಧಿಸಿದ್ದಾರೆ.

“ಆರೋಪಿ ಕೃಷ್ಣಾ ಬಳಿ ಎಟಿಎಂ ಕೀಲಿ ಇತ್ತು. ಆ ಕೀಲಿ ಬಳಸಿ ಎಟಿಎಂನಿಂದ 8.65 ಲಕ್ಷ ರೂ. ಹಣ ಕದ್ದಿದ್ದಾನೆ. ಕದ್ದ ಹಣದಲ್ಲಿ ತನ್ನ ತಾಯಿಗಾಗಿ ‌1.54 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಖರೀದಿಸಿದ್ದಾನೆ. ಮೋಜು-ಮಸ್ತಿಗೂ ಹಣ ಬಳಸಿಕೊಂಡಿದ್ದಾನೆ. ಚಿನ್ನದ ಸರ ಮತ್ತು 5.74 ಲಕ್ಷ ರೂ. ಹಣವನ್ನು ಕೃಷ್ಣಾನಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...