ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ವರದಿಯ ನಂತರ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ನಿವಾಸಿ ಬಾಣಂತಿ ಕಲ್ಪನಾ ರಾಠೋಡ ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದು. ತಾಯಿ ಮಗು ಆರೋಗ್ಯವಾಗಿದ್ದಾರೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದರು. ಆದರೆ ಮಂಗಳವಾರ ಬೆಳಿಗ್ಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಆಗಿದೆ ಎಂದು, ನಂತರ ಬಾಣಂತಿ ಮೃತಪಟ್ಟಿರುವುದು ಕುಟುಂಬದವರ ಆಕ್ರೋಶಕ್ಕೆ ಕಾಣವಾಗಿತ್ತು.
ಬಾಣಂತಿ ಮಹಿಳೆಯ ಕುಟುಂಬದ ಸದಸ್ಯರು ಆರೋಗ್ಯದಲ್ಲಿ ತೊಂದರೆಯಾಗಿದ್ದರೆ ಬೇರೆ ಆಸ್ಪತ್ರೆಗೆ ರವಾನಿಸಲು ಅವಕಾಶ ಕೊಡಿ ಎಂದು ಮಹಿಳೆ ಕುಟುಂಬದವರು ಕೇಳಿಕೊಂಡರು. ಬಿಮ್ಸ್ ವೈದ್ಯರು ಯಾವುದೇ ಸ್ಪಂದನೆ ನೀಡಿಲ್ಲ ಎಂದು ದೂರಿದ್ದಾರೆ.
ಇದನ್ನು ಓದಿದ್ದೀರಾ? ಬೆಳಗಾವಿ | ಕತ್ತು ಕೊಯ್ದು ವ್ಯಕ್ತಿಯ ಕೊಲೆ: ಪತಿಯ ಕೊಲ್ಲಲು ಪತ್ನಿಯಿಂದಲೇ ಸುಪಾರಿ
ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿ, ವೈದ್ಯರ ನಿರ್ಲಕ್ಷ್ಯದಿಂದ ಕಲ್ಪನಾ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆರೋಪಿಸಿದ್ದಾರೆ. ಹಾಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತಿದ್ದಾರೆ. ಅವರು ನೀಡುವ ವರದಿ ಆಧರಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.