ಬೆಳಗಾವಿ | ತಮ್ಮನ ಪತ್ನಿಗೆ ಚಾಕು ಇರಿದು ಹತ್ಯೆ; ಆರೋಪಿ ಪರಾರಿ

Date:

ತಮ್ಮನ ಪತ್ನಿಯನ್ನು ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಟಿಳಕವಾಡಿಯ ಮಂಗಳವಾರ ಪೇಟೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

- Advertisement -

ಮೃತರನ್ನು ಗೀತಾ ಗವಳಿ (45) ಎಂದು ಗುರುತಿಸಲಾಗಿದೆ. ಆರೋಪಿ ಗಣೇಶ ಗವಳಿ, ಗೀತಾಳ ಮೇಲೆ ಸುಮಾರು 20 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು, ಗಂಭೀರವಾಗಿ ಗಾಯಗೊಳಿಸಿದ್ದಾನೆ. ಗೀತಾ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮೃತರ ಪತಿ ರಂಜಿತ್ ಗವಳಿ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದು, ಪತಿಗೆ ಸೇರಿದ ಜಾಗ ಸಂಬಂಧವಾಗಿ ಗೀತಾ ಮತ್ತು ಆರೋಪಿ ನಡುವೆ ದೀರ್ಘಕಾಲದಿಂದ ವಿವಾದವಿತ್ತು. ಇಂದು ನಡೆದ ಜಗಳವೇ ಹತ್ಯೆಗೆ ದಾರಿ ಮಾಡಿಕೊಟ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ: ಬೆಳಗಾವಿ | ಧರ್ಮಾಂದತೆಯ ‘ದ್ವೇಷ’ದ ವಿಷವನ್ನು ಸೋಲಿಸಿದ ಮುಸ್ಲಿಮ್ ಶಿಕ್ಷಕನ ‘ಪ್ರೀತಿ’

ಕೊಲೆ ಬಳಿಕ ಆರೋಪಿ ಗಣೇಶ ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಟಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರೌಡಿಶೀಟರ್ ಆಗಿರುವ ಗಣೇಶನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ದಲಿತರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯ: ಸಂಜೀವ ಬಳ್ಕೂರು

ದಲಿತರ ಹಕ್ಕು, ಸಮಸ್ಯೆ ಹಾಗೂ ನ್ಯಾಯಕ್ಕಾಗಿ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟನೆಯೇ...

ಬೀದರ್ | ಉದ್ಯೋಗ ಖಾತ್ರಿ ಯೋಜನೆಯಡಿ 20 ಲಕ್ಷ ಮಾನವ ದಿನ ಸೃಜನೆ: ಈಶ್ವರ ಖಂಡ್ರೆ

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಬೀದರ್ ಜಿಲ್ಲೆಯಲ್ಲಿ 20...

ಗದಗ | ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ

ಗದಗ ಜಿಲ್ಲೆಯ ಮುಳಗುಂದದ ಶ್ರೀ ಆರ್. ಎನ್. ದೇಶಪಾಂಡೆ ಸರ್ಕಾರಿ ಪ್ರಥಮ...

ಶಿವಮೊಗ್ಗ | ಸಿಇಒ ಹೇಮಂತ್‌ಗೆ ಬೀಳ್ಕೊಡುಗೆ; ನೂತನ ಸಿಇಒ ರಿಷಿ ಆನಂದ್‌ ಸ್ವಾಗತಿಸಿದ ಜಿ.ಪಂ

ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ನಿಕಟಪೂರ್ವ...