ಬೆಳಗಾವಿ | ಕಾಗವಾಡ ತಾಲೂಕಿಗೆ ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿ

Date:

ಕಿತ್ತೂರು ಉತ್ಸವದ ಭಾಗವಾಗಿ ವೀರರಾಣಿ ಕಿತ್ತೂರು ಚೆನ್ನಮ್ಮ ಜ್ಯೋತಿಯು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಅಕ್ಟೋಬರ್‌ 17ರಂದು ವೀರ ಜ್ಯೋತಿಯು, ಕಾಗವಾಡ ತಾಲೂಕನ್ನು ತಲುಪಿದ್ದು, ತಾಲೂಕಿನ ಜನತೆ ಸಂಭ್ರಮದಿಂದ, ವೀರ ಜ್ಯೋತಿಯನ್ನು ಬರಮಾಡಿಕೊಂಡರು. ಅಕ್ಟೊಬರ್‌ 23ರಿಂದ 25ರವರೆಗೆ ಕಿತ್ತೂರು ಉತ್ಸವ ನಡೆಯಲಿದೆ.

- Advertisement -

ಬೆಂಗಳೂರಿನಿಂದ ಹೊರಟ ವೀರ ಜ್ಯೋತಿ ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮಕ್ಕೆ ತಲುಪಿದೆ. ವೀರ ಜ್ಯೋತಿಯನ್ನು ತಾಲೂಕು ಆಡಳಿತ ಸ್ವಾಗತಿಸಿತು. ತಹಸೀಲ್ದಾರ್‌ ರಾಜೇಶ್ ಬುರ್ಲಿ ಪೂಜೆ ಸಲ್ಲಿಸಿ‌, ಮಾಲಾರ್ಪಣೆ ಮಾಡಿ ಬರಮಾಡಿಕೊಂಡರು. ಅಂಗನವಾಡಿ ಕಾರ್ಯಕರ್ತೆಯರು ಆರತಿ ಎತ್ತಿ, ಜಯ ಘೋಷಗಳೊಂದಿಗೆ ಮೆರವಣಿಗೆ ಮೂಲಕ, ಕಾಗವಾಡ ತಾಲ್ಲೂಕಿನ ಉಗಾರ ಗ್ರಾಮಕ್ಕೆ ಜ್ಯೋತಿಯನ್ನು ಬೀಳ್ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ವೇಳೆ ಮಾತನಾಡಿದ ಕಾಗವಾಡ ತಾಲೂಕಿನ ತಹಸೀಲ್ದಾರ್‌, “ವೀರರಾಣಿ ಚೆನ್ನಮ್ಮನ ಸಾಹಸ ಶೌರ್ಯ ನಾಡಿನ ಜನರಿಗೆ ತಿಳಿಸುವ ಉದ್ದೇಶದಿಂದ ವೀರಜ್ಯೋತಿ ಸಂಚಾರಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಈಗ ಕಾಗವಾಡ ತಾಲೂಕಿಗೆ ಬಂದಿದೆ”  ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಳು ಬಜಂತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜೆ, ಸಿಡಿಪಿಒ ಸಂಜುಕುಮಾರ ಸದಲಗೆ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಪೂಜಾರಿ, ಸಂಜಯ ತಳವಲಕರ, ಕಂದಾಯ ನಿರೀಕ್ಷಕ ಎಸ್.ಬಿ. ಮುಲ್ಲಾ, ಎಎಸ್‌ಐಬಿಎಂ ರಜಾಕನವರ ಬಾಬಾಸಾಹೇಬ ಪಾಟೀಲ್, ದೀಪಕ ಕುಟ್ಟವಾಡೆ, ಸಂಜೀವ ಸೂರ್ಯವಂಶಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...