ಬೆಳಗಾವಿ | ಮುಸ್ಲಿಂ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್​​ಗೆ ವಿಷ ಹಾಕಿದ ಕೋಮುವಾದಿ ದುರುಳರು

Date:

ಸರ್ಕಾರಿ ಶಾಲೆಯ ಮುಸ್ಲಿಂ ಮುಖ್ಯಶಿಕ್ಷಕರನ್ನು ವರ್ಗಾವಣೆ ಮಾಡಿಸಬೇಕೆಂದು ಸಂಚು ರೂಪಿಸಿದ್ದ ಕೋಮುವಾದಿ ದುರುಳರು ಶಾಲೆಯ ನೀರಿನ ಟ್ಯಾಂಕ್‌ ವಿಷ ಹಾಕಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದುರ್ಘಟನೆ ನಡೆದಿದೆ. ಆ ನೀರು ಸೇವಿಸಿದ್ದ 11 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ಕೀಟನಾಶಕ ಸುರಿದಿದ್ದರು ಎಂದು ತಿಳಿದುಬಂದಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಘಟನೆ ಸಂಬಂಧ ಸವದತ್ತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು ಸಾಗರ ಪಾಟೀಲ, ನಾಗನಗೌಡ ಪಾಟೀಲ ಹಾಗೂ ಕೃಷ್ಣ ಮಾದರ ಎಂದು ಗುರುತಿಸಲಾಗಿದೆ.

“ಆರೋಪಿಗಳು ಶ್ರೀರಾಮ ಸೇನೆ ಸಂಘಟನೆ ಜೊತೆ ಗುರುತಿಸಿಕೊಂಡಿದ್ದಾರೆ. ಹೂಲಿಕ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 13 ವರ್ಷಗಳಿಂದ ಮುಖ್ಯೋಪಾಧ್ಯಾಯನಾಗಿ ಸೇವೆ ಸಲ್ಲಿಸುತ್ತಿರುವ ಸುಲೇಮಾನ್ ಗೋರಿನಾಯ್ಕ ಅವರನ್ನು ವರ್ಗಾವಣೆ ಮಾಡಿಸಬೇಕೆಂದು ಆರೋಪಿಗಳು ಸಂಚು ರೂಪಿಸಿದ್ದರು. ಮುಖ್ಯಶಿಕ್ಷಕರಿಗೆ ಕೆಟ್ಟ ಹೆಸರು ಬರುವಂತೆ ಮಾಡುವುದಕ್ಕಾಗಿ ನೀರಿಗೆ ವಿಷ ಸುರಿದಿದ್ದಾರೆ” ಎಂದು ಬೆಳಗಾವಿ ಎಸ್‌ಪಿ ಡಾ. ಭೀಮಾಶಂಕರ ಗುಳೇದ್‌ ತಿಳಿಸಿದ್ದಾರೆ.

“ಕೃತ್ಯ ಎಸಗಿರುವ ಆರೋಪಿಗಳು ಸ್ನೇಹಿತರಾಗಿದ್ದಾರೆ. ಆರೋಪಿ ನಾಗನಗೌಡ ಎಂಬಾತ ಮತ್ತೋರ್ವ ಆರೋಪಿ ಸಾಗರ್‌ನ ಸಂಬಂಧಿಯೂ ಆಗಿದ್ದಾನೆ. ಅಂತರ್ಜಾತಿ ಪ್ರೀತಿಯಲ್ಲಿದ್ದ ಕೃಷ್ಣನನ್ನು ಸಾಗರ್ ಮತ್ತು ನಾಗನಗೌಡ ಬೆದರಿಸಿ, ಆತನ ಮೂಲಕ ಕೃತ್ಯ ಎಸಗಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು,...

ಕೋಲಾರ | ಮದನಹಳ್ಳಿಯಲ್ಲಿ ತಿಪ್ಪೆ ವಿಚಾರವಾಗಿ ಗಲಾಟೆ: ಐವರ ಮೇಲೆ ಹಲ್ಲೆ ಆರೋಪ

ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್...

ಕೋಲಾರ | ಜಿಲ್ಲೆಯಲ್ಲಿ ಶೇ. 10 ರಷ್ಟು ಮಾತ್ರ ಅರಣ್ಯ ಶೇ 4 ಅರಣ್ಯ ಒತ್ತುವರಿ : ಸರೀನಾ ಸಿಕ್ಕಲಿಗರ್

ಜಿಲ್ಲೆಯಲ್ಲಿ ಕೇವಲ ಶೇ.10 ರಷ್ಟು ಮಾತ್ರ ಅರಣ್ಯ ಉಳಿದಿದ್ದು, ಅದರಲೂ ಸಹ...