ಬೆಳಗಾವಿ | ಸಿ.ಟಿ ರವಿ ಪ್ರಕರಣ ಮುಂದುವರೆಸುವುದರಲ್ಲಿ ಅರ್ಥವಿಲ್ಲ ಮತ್ತು ಅನವಶ್ಯಕ: ಸತೀಶ ಜಾರಕಿಹೊಳಿ

Date:

ಸಿ ಟಿ ರವಿ ಅವಾಚ್ಯ ಶಬ್ಧ ಬಳಕೆಯಂತಹ ಘಟನೆಗಳು ದೇಶದಲ್ಲಿ ಹೊಸದಲ್ಲ. ಮತ್ತು ಈ ಘಟನೆ ನಡೆದು ಹೋಗಿದೆ. ಈ ಹಿಂದೆ ಸಂಸತ್ತು ಮತ್ತು ವಿಧಾನಸಭೆಯಲ್ಲೂ ನಡೆದಿವೆ. ಆದ್ಧರಿಂದ ಅದನ್ನು ಮತ್ತೆ ಮುಂದುವರೆಸುವುದು ಅನವಶ್ಯಕ ಎಂದು ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ತಿಳಿಸಿದರು.

- Advertisement -

ಸಿ ಟಿ ರವಿ ಅವಾಚ್ಯ ಶಬ್ದ ಬಳಿಸಿಲ್ಲವೆಂದು ಹೇಳುತ್ತಿದ್ದಾರೆ. ಹೀಗಾಗಿ ಈ ಕೇಸ್ ಇಲ್ಲಿಗೆ ಮುಗಿಸದರೆ ಒಳ್ಳೆಯದು. ಬೆಳಗಾವಿ ಸುವರ್ಣಸೌದದಲ್ಲಿ ಇಂತಹ ಪ್ರಕರಣ ಈ ಹಿಂದೆ ಆಗಿರಲ್ಲಿಲ್ಲ. ಕ್ಷಮೆ ಕೇಳಿದ ಬಳಿಕ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಿ.ಟಿ ರವಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದರು. ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ ನಾನು ಪೊಲೀಸರಿಗೆ ಹೇಳಿದ್ದೆ. ಆದರೆ ಯಾರ ನಿರ್ದೇಶನದ ಮೇರೆಗೆ ಸಿ.ಟಿ ರವಿಯನ್ನು ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ಎಂಬುದು ನನಗೆ ಗೊತ್ತಿಲ್ಲ.

ಬೆಳಗಾವಿ ಪೊಲೀಸರು ರಾತ್ರಿಯೇ ಕೋರ್ಟ್ ಗೆ ಹಾಜರು ಪಡಿಸಿದ್ದರೆ ಇಷ್ಟೇಲ್ಲ ಆಗುತ್ತಿರಲಿಲ್ಲ. ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಪೊಲೀಸರು ಅವರನ್ನು ರೌಂಡ್ಸ್ ಹೊಡಿಸಿದ್ದಾರೆ ಎಂಬ ಮಾಹಿತಿಯಿದ್ದು ಇದರಲ್ಲಿ ಬೇರೆ ಯಾವ ಉದ್ದೇಶವೂ ಇಲ್ಲ. ಹೀಗಾಗಿ ಈ ಪ್ರಕರಣ ಮುಂದುವರೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...